ನಾವು ಭೈರತಿ ಬಸವರಾಜ್ ಪರ ಕೆಲಸ ಮಾಡಲು ಸಾಧ್ಯವಿಲ್ಲ-ಕೆ.ಆರ್ ಪುರಂ ಬಿಜೆಪಿ ಟಿಕೆಟ್ ಆಕಾಂಕ್ಷಿ ನಂದೀಶ್ ರೆಡ್ಡಿ ಸ್ಪಷ್ಟನೆ…

Promotion

ಬೆಂಗಳೂರು,ಸೆ,26,2019(www.justkananda.in):  ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ  ಉಪಚುನಾವಣೆಗೆ ಮೂರು ಪಕ್ಷಗಳೂ ಸಿದ್ಧತೆ ನಡೆಸುತ್ತಿದ್ದು ಈ ನಡುವೆ ಅನರ್ಹ ಶಾಸಕರಿಗೆ ಟಿಕೆಟ್ ನೀಡಲು ಮುಂದಾಗಿರುವ ಬಿಜೆಪಿಗೆ ಭಿನ್ನಮತ ಕಾಡುತ್ತಿದೆ.

ಕೆ.ಆರ್ ಪುರಂ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಂದೀಶ್ ರೆಡ್ಡಿ ತಮಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ. ಹಾಗೆಯೇ ಅನರ್ಹ ಶಾಸಕ ಭೈರತಿ ಬಸವರಾಜ್ ಗೆ ಟಿಕೆಟ್ ನೀಡಿದರೇ ಅವರ ಪರ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಇಂದು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನ ಬೆಂಬಲಿಗರೊಂದಿಗೆ ಭೇಟಿಯಾದ ನಂದೀಶ್ ರೆಡ್ಡಿ, ತಮಗೆ ಟಿಕೆಟ್ ನೀಡಲು ಮನವಿ ಮಾಡಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ನಂದೀಶ್ ರೆಡ್ಡಿ, ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಭೈರತಿ ಬಸವರಾಜ್ ಬಿಜೆಪಿ ವಿರುದ್ದ ಕೆಲಸ ಮಾಡಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಸಾಕಷ್ಟು ತೊಂದರೆ ಕೊಟ್ಟಿದ್ದಾರೆ. ಹೀಗಿರುವಾಗ ಅವರಿಗೆ ಹೇಗೆ ಟಿಕೆಟ್ ಕೊಡಲು ಆಗುತ್ತೆ.? ಎಂದು ಪ್ರಶ್ನಿಸಿದರು.

ಯಾವುದೇ ಕಾರಣಕ್ಕೂ ಭೈರತಿ ಬಸವರಾಜ್ ಗೆ ಟಿಕೆಟ್ ನೀಡಬಾರದು. ಟಿಕೆಟ್ ನೀಡಿದರೇ ಅವರ ಪರ ನಾವು ಕೆಲಸ ಮಾಡಲು ಸಾಧ್ಯವಿಲ್ಲ ಎಂದು ನಂದೀಶ್ ರೆಡ್ಡಿ ತಿಳಿಸಿದರು.

Key words: KR Puram-BJP -ticket aspirant -Nandish Reddy –cannot -work – Bhairati Basavaraj.