“ಕೆ ಎಸ್ ಆರ್ ಟಿ ಸಿ ನೌಕರರ ತರಬೇತಿ ಅವಧಿ 2 ವರ್ಷದಿಂದ 1 ವರ್ಷಕ್ಕೆ ಅನುಮೋದನೆ” : ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು,ಮಾರ್ಚ್,18,2021(www.justkannada.in) : ನಮ್ಮ ಸರ್ಕಾರವು ಸಾರಿಗೆ ಸಿಬ್ಬಂದಿಯ ಬೇಡಿಕೆಗಳಿಗೆ ಸ್ಪಂದಿಸಿ ಸಾರಿಗೆ ಸಂಸ್ಥೆಗಳಲ್ಲಿ ತರಬೇತಿಯಲ್ಲಿರುವ ನೌಕರರ ತರಬೇತಿ ಅವಧಿಯನ್ನು 2 ವರ್ಷದಿಂದ 1 ವರ್ಷಕ್ಕೆ ಇಳಿಸಲು ಅವಕಾಶ ನೀಡಿದ್ದು , ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ

 KSRTC-employees-Training-period-2years-1year-Approval-DCM- Lakshmana Savadi

ತರಬೇತಿಯಲ್ಲಿರುವ ನೌಕರರ ತರಬೇತಿ ಅವಧಿಯನ್ನು ಜುಲೈ 2021ರಿಂದ ಜಾರಿಗೆ ಬರುವಂತೆ 2 ವರ್ಷಗಳಿಂದ 1 ವರ್ಷಕ್ಕಿಳಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

key words : KSRTC-employees-Training-period-2years-1year-Approval-DCM- Lakshmana Savadi