ಕೆಯುಡಬ್ಲ್ಯೂಜೆಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಜೂನ್ ಅಂತ್ಯದೊಳಗೆ ವಿದ್ಯಾರ್ಥಿಗಳ ಹೆಸರು ಕಳುಹಿಸುವಂತೆ ಸೂಚನೆ.

Promotion

ಬೆಂಗಳೂರು,ಜೂನ್,23,2022(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.

ಎಸ್ ಎಸ್ ಎಲ್‌ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ (ಶೇ.80)ಗಳನ್ನು ಪಡೆದ ವಿದ್ಯಾರ್ಥಿಗಳಿಗೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಮಟ್ಟದಲ್ಲಿಯೂ ಇದೇ ರೀತಿಯಲ್ಲಿ ಶೇ.90 ಕ್ಕೂ ಹೆಚ್ಚು ಅಂಕ‌ಪಡೆದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು.

ಈ ಬಗ್ಗೆ ಪ್ರತಿ ಜಿಲ್ಲೆಯಿಂದಲೂ ಶೇ.90 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಹೆಸರುಗಳನ್ನು ಅವರುಗಳ ಅಂಕಪಟ್ಟಿ‌, ಆಧಾರ್ ಕಾರ್ಡ್/ಪಡಿತರ ಕಾರ್ಡ್ ಸಹಿತ, ನಿಖರ ಸಂಪರ್ಕ ವಿಳಾಸದ ಜೊತೆಯಲ್ಲಿ ಜೂನ್ ಅಂತ್ಯದೊಳಗೆ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆ.ಜಿ.ರಸ್ತೆ, ಬೆಂಗಳೂರು-09 ಇಲ್ಲಿಗೆ ಕಳುಹಿಸಿಕೊಡುವಂತೆ ಕೆಯುಡಬ್ಲ್ಯುಜೆ ತಿಳಿಸಿದೆ.

Key words: KUWJ – award –journalist-children