ನಾಳೆ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಲವಂತವಾಗಿ ಬಂದ್ ಮಾಡಿಸಿದ್ರೆ ಕಠಿಣ ಕ್ರಮ- ಎಚ್ಚರಿಕೆ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್…

ಬೆಂಗಳೂರು,ಜ,7,2020(www.justkannada.in):  ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ನಾಳೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ ಬಲವಂತವಾಗಿ ಬಂದ್ ಮಾಡಿಸಿದರೇ ಕಠಿಣಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ನಾಳಿನ ಮುಷ್ಕರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ನಾಳೆ ಬಂದ್ ಇದ್ದರೂ ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ. ಬಂದ್ ಹೆಸರಲ್ಲಿ ಮೆರವಣಿಗೆಗೂ ಅವಕಾಶ ಇಲ್ಲ. ಪ್ರತಿಭಟನೆ ನಡೆಸಲು ಫ್ರೀಡಂ ಪಾರ್ಕ್ ನಲ್ಲಿ ಅವಕಾಶ  ನೀಡಲಾಗಿದೆ.  ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿ ಅದನ್ನ ಹೊರತುಪಡಿಸಿ ಬೇರೆಲ್ಲೂ ಅವಕಾಶ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾಳೆ ಮುಷ್ಕರ ಹಿನ್ನೆಲೆ ಸಾರ್ವಜನಿಕರ ಜೀವನಕ್ಕೆ ತೊಂದರೆ ಇಲ್ಲ ಬಿಎಂಟಿಸಿ ಕೆಎಸ್ ಆರ್ ಟಿಸಿ ಬಸ್ ಎಂದಿನಂತೆ ಸಂಚಾರ ಇರಲಿದೆ.  ನಾಳೆ ಯಾವುದೇ ರ್ಯಾಲಿಗೂ ಅವಕಾಶಗಳಿಲ್ಲ. ಬಲವಂತ ಬಂದ್ ಮಾಡಿಸಿದರೇ ಕಠೀಣ ಕ್ರಮ ಕೈಗೊಳ್ಳಲಾಗುತ್ತದೆ ಎಂಧು ಭಾಸ್ಕರ್ ರಾವ್ ತಿಳಿಸಿದರು.

Key words: labor unions – strike -Forced –action-Bangalore City- Police Commissioner -Bhaskar Rao