ರೈತ ಸಂಘ ಹಾಗೂ ದಲಿತ ಸಂಘಟನೆಗಳ ವತಿಯಿಂದ ಸೆ.5 ರಂದು ರಾಜ್ಯಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ….

Promotion

ಮೈಸೂರು,ಸೆಪ್ಟಂಬರ್.2,2020(www.justkannada.in):  ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂಸುಧಾರಣಾ ಕಾಯ್ದೆ ತಿದ್ಧುಪಡಿ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ರಾಜ್ಯ ರೈತ ಸಂಘ ಮತ್ತು ದಲಿತ ಸಂಘಟನೆಗಳು  ಇದೇ ಸೆಪ್ಟಂಬರ್ 5 ರಂದು ರಾಜ್ಯಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ ಆಯೋಜಿಸಿವೆ.jk-logo-justkannada-logo

ಈ ಸಂಬಂಧ ಇಂದು  ಮೈಸೂರಿನ ಪತ್ರಕರ್ತರ ಭವನದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಲಿತ ಸಂಘರ್ಷ ಸಮಿತಿ ಒಕ್ಕೂಟಗಳ ವತಿಯಿಂದ ಜಂಟಿ ಸುದ್ದಿಗೋಷ್ಠಿ ನಡೆಸಲಾಯಿತು. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಬಡಗಲಪುರ ನಾಗೇಂದ್ರ, ಭೂ ಸುಧಾರಣಾ ಕಾಯ್ದೆ ತಿದ್ಧುಪಡಿ ವಿರುದ್ದದ ಹೋರಾಟದ ಭಾಗವಾಗಿ ಇದೇ ಸೆಪ್ಟೆಂಬರ್ 5 ರಂದು ರೈತ ಸಂಘ ಹಾಗೂ ದಲಿತ ಸಂಘಟನೆಗಳ ವತಿಯಿಂದ ರಾಜ್ಯಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ ಆಯೋಜಿಸಲಾಗಿದೆ. ಸಿದ್ದಾರ್ಥನಗರದಲ್ಲಿರುವ ಕನಕಭವನದಲ್ಲಿ ಈ ಸಂವಾದ ಆಯೋಜನೆ ಮಾಡಲಾಗಿದ್ದು ದಲಿತ ಸಾಹಿತ ದೇವನೂರ ಮಹಾದೇವ ಅವರು ಗೋಷ್ಠಿ ಉದ್ಘಾಟನೆ ಮಾಡಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳು, ವಿದ್ಯುತ್ ಖಾಸಗೀಕರಣ, ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವು ವಿಷಯಗಳ ಕುರಿತು ಸಂವಾದ ಹಾಗೂ ಗೋಷ್ಠಿಯಲ್ಲಿ ಚರ್ಚಿಸಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.Land Reform Act Amendment-State Level Seminar -Conversation -September 5th.

ಗೋಷ್ಠಿಯಲ್ಲಿ 500 ಕ್ಕೂ ಹೆಚ್ಚು ರೈತರು, ರೈತಪರ ಹೋರಾಟಗಾರರು, ಪ್ರಗತಿಪರ ಚಿಂತಕರು ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು. ‘

Key words: Land Reform Act Amendment-State Level Seminar -Conversation -September 5th.