ಆ.1 ರಂದು ಗೃಹಜ್ಯೋತಿ, ಆ. 17-18 ರಂದು ಗೃಹ ಲಕ್ಷ್ಮಿ ಯೋಜನೆ ಚಾಲನೆಗೆ ಸಿದ್ಧತೆ- ಸಿಎಂ ಸಿದ್ಧರಾಮಯ್ಯ.

kannada t-shirts

ಬೆಂಗಳೂರು, ಜೂನ್‌ ,8,2023(www.justkannada.in): ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಸುದೀರ್ಘ ಸಭೆ ನಡೆಸಿ ಚರ್ಚಿಸಿದರು.

ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ :

ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗುವುದು. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು ಎಂದು  ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಗೆ ಆಧಾರ್‌, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ.

ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆ.

ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಯಿತು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್‌ ನಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಯಿತು.

ಅರ್ಜಿದಾರರು ರೇಷನ್‌ ಕಾರ್ಡ್‌ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ, ಆಧಾರ್‌ ಸಂಯೋಜನೆಯಾಗಿರುವ ಬ್ಯಾಂಕ್‌ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ ಲೈನ್‌ ಅರ್ಜಿಗಳೊಂದಿಗೂ ಸಲ್ಲಿಸಬಹುದು.

ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್‌ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಈ ಯೋಜನೆಯು ರಾಜ್ಯದ ಶೇ. 85 ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್‌ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕಂದಾಯ ಇಲಾಖೆ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಠಾರಿಯಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎನ್. ಜಯರಾಂ, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಪಿ.ಸಿ.ಜಾಫರ್‌, ಇ-ಆಡಳಿತ ಇಲಾಖೆಯ ನಿರ್ದೇಶಕರಾದ ಮೀನಾ ನಾಗರಾಜ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ENGLISH SUMMARY..

Launch of Griha Jyothi on August 1, Griha Lakshmi Yojana on August 17-18
Chief Minister Siddaramaiah holds high-level meeting on the implementation of the projects
Directs officials to make the application and approval process very simple

Bengaluru, June 8-
Chief Minister Siddaramaiah said that, Griha Jyoti scheme will be launched on August 1 and Griha Lakshmi scheme on August 17-18.
He held a high level meeting with senior government officials today regarding Griha Jyoti and Griha Lakshmi schemes here today.
The Chief Minister instructed the officers that the application process for all guarantee schemes should be made very simple. Unnecessary information and documents should not be asked. Also if applications are rejected, appropriate reasons should be cited. He warned the officials not to reject for silly reasons.
Since a large number of applications are expected to be submitted in all the guarantee schemes, the Chief Minister directed the officials of the e-governance department to increase the capacity of the Seva Sindhu portal in accordance with the huge amount of data submitted.
Griha Jyoti:
We are planning to lauch Griha Jyoti scheme on 1st August at Kalaburgi. He instructed the officials to remove all the confusions about the guidelines of this scheme and make the citizens aware.
Registration for Griha Jyoti scheme can be done through Seva Sindhu Portal. In addition, help desks will be established in all ESCOMs. The registration process will start from June 15. Application can be submitted through Bangalore One, Karnataka One, Gram One centers and also can be submitted at home through computer or mobile app. New house owners or new tenants will also be given free electricity facility based on the state average of electricity consumption. The Chief Minister said that once the average of one year is available, based on this data, free electricity will be provided.
Arrears of old electricity bill will be allowed to pay till September 30. Tenants can avail this facility by submitting the agreement letter, Aadhaar card, R. R. No., and voter ID of the same address.
Griha Lakshmi:
Disscussions was held to launch Griha Lakshmi scheme on August 17 or 18 in Belagavi. The application process will be started from June 15. One can apply for this scheme online through Seva Sindhu portal. Similarly, applications can also be submitted offline in person at Nadakacheris where separate counters will be setup for this purpose.
Applicants should provide Ration Card Number, Aadhaar Card Number of wife and husband, bank account details with Aadhaar combination. Copies of these documents can also be submitted with offline applications.
The scheme amount will be deposited directly into the bank account of the eligible beneficiaries through DBT. It is estimated that, this scheme will reach around 85 % of families in the State. APL cardholders who are not tax payers, have no GST registration will also get this facility.

Energy Minister K.J. George, Minister for Woman and Child Welfare Lakshmi Hebbalkar, Chief Secretary Vandita Sharma, ACS to Chief Minister Dr. Rajneesh Goyal, Energy Department ACS Gaurav Gupta, Women and Child Welfare Department Secretary Dr.N. Manjula, Revenue Department Secretary Rajender Kumar Katharia, Secretary to CM N. Jayaram, Finance Secretary PC Jaffer, E-Governance Director Meena Nagaraj and other senior officials were present in the meeting.

Key words: Launch -Griha Jyothi – August 1- Griha Lakshmi Yojana – August 17-18-CM-Siddaramaiah

website developers in mysore