ಕಾನೂನು ಸುವ್ಯವಸ್ಥೆ ಹತೋಟಿಗೆ ಬಂದಿದೆ: ಪ್ರಚೋದನಾಕಾರಿ ಹೇಳಿಕೆ ಕೊಡಬೇಡಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ..

ಬೆಂಗಳೂರು,ಡಿ,20,2019(www.justkannada.in):  ಸದ್ಯ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ಬಂದಿದೆ. ಯಾರೂ ಸಹ ಪ್ರಚೋದನಾಕಾರಿ ಹೇಳಿಕೆಗಳನ್ನ ನೀಡಬೇಡಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಇಂದು ಮಂಗಳೂರು ಪರಿಸ್ಥಿತಿ ಬಗ್ಗೆ ಮಾಧ್ಯಮಗಳ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಯಾಗಬಾರದು. ಶಾಂತಿ ಕಾಪಾಡುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತ ಮುಖಂಡರ ಜತೆ ಸಿಎಂ ಬಿಎಸ್ ವೈ ಚರ್ಚೆ ನಡೆಸಿದ್ದಾರೆ.  ಸಿಎಂ ಚರ್ಚೆ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಇದರಲ್ಲಿ ವಿಪಕ್ಷಗಳು ರಾಜಕೀಯ ಬೆರೆಸಬೇಡಿ ಎಂದು ಮನವಿ ಮಾಡಿದರು.

ಘಟನೆ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮಾಹಿತಿ ನೀಡಿದ್ದು ಈ ಬಳಿಕ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ.  ಶಾಂತಿ ಕಾಪಾಡುವ ಕಡೆ ಗಮನಹರಿಸಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Key words: Law and order – possession-Don’t- provocative statement- Home Minister -Basavaraja Bommai