ಗುಡಿಸಿಲಿನಲ್ಲಿ ವಾಸವಾಗಿದ್ದವರಿಗೆ ಮನೆ ಮಂಜೂರಾತಿ ಪತ್ರ ವಿತರಿಸಿದ ಶಾಸಕ ಎಸ್.ಎ.ರಾಮದಾಸ್

Promotion

ಮೈಸೂರು,ಸೆಪ್ಟೆಂಬರ್, 07,2020(www.justkannada.in) : ಕೃಷ್ಣರಾಜ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.62 ರ ದರ್ಮಸಿಂಗ್ ಕಾಲೋನಿ “ಬಿ’ ಬ್ಲಾಕ್ ನಲ್ಲಿ ಗುಡಿಸಿಲಿನಲ್ಲಿ ವಾಸವಾಗಿದ್ದವರಿಗೆ ಶಾಸಕ ಎಸ್.ಎ.ರಾಮದಾಸ್ ಮನೆ ಮಂಜೂರಾತಿ ಪತ್ರ ವಿತರಿಸಿದರು.

jk-logo-justkannada-logo
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನಿರ್ಮಿಸಿಕೊಡುವ ಕಾರ್ಯವೂ ಹಲವಾರು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದು, ಮನೆಗಳಿಗೆ ಸಂಬಂಧಿಸಿದ ಮನೆ ಮಂಜೂರಾತಿ ಪತ್ರವನ್ನು ಒಟ್ಟು 55 ಜನ ಫಲಾನುಭವಿಗಳಿಗೆ ರಾಮದಾಸ್ ವಿತರಿಸಿದರು.


ರಾಜ್ಯ ಸರ್ಕಾರದ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು(ನ) ಯೋಜನೆಯೊಂದಿಗೆ ಸಮನ್ವಯಗೊಳಿಸಿ ಅನುಷ್ಠಾನಗೊಳಿಸಿಸಲಾಗುತ್ತಿದೆ.
ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಯನ್ನು ತ್ವರಿತವಾಗಿ ಮನೆ ನಿರ್ಮಾಣ ಮಾಡುವುದಲ್ಲದೆ, ಮಂಜೂರಾತಿ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಲು ಪ್ರಮುಖ ಪಾತ್ರವಹಿಸಿದ ಶಾಸಕ ಎಸ್.ಎ.ರಾಮದಾಸ್ ಗೆ ಎಲ್ಲಾ 55 ಫಲಾನುಭವಿಗಳು ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ನಗರ ಎಸ್.ಸಿ.ಮೋರ್ಚಾ ಅಧ್ಯಕ್ಷ ಈಶ್ವರ್, ಕೆ.ಆರ್.ಕ್ಷೇತ್ರದ ಎಸ್.ಸಿ.ಮೋರ್ಚಾ ಅಧ್ಯಕ್ಷ ಮುರುಳಿ, ಸಾಮಾಜಿಕ ಕಾರ್ಯಕರ್ತ ಸುಬ್ಬರಾವ್ , ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಎಕ್ಸಿಕ್ಯಟಿವ್ ಎಜಿನಿಯರ್ ಹರೀಶ್ ಕುಮಾರ್ ಇತರರು ಉಪಸ್ಥಿತರಿದ್ದರು.

key words ; Lawmaker-S.A.Ramadas-issued-house-grant-lette-living-huts