ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗಿಲ್ಲ- ಕೃಷಿ ಸಚಿವ ಬಿ.ಸಿ ಪಾಟೀಲ್.

Promotion

ಬೆಂಗಳೂರು,ಜೂನ್,17,2021(www.justkannada.in):  ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜತೆಗಿನ ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಸ್ಪಷ್ಟನೆ ನೀಡಿದರು.jk

ಈ ಬಗ್ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ಪಾಟೀಲ್,  ಅರುಣ್ ಸಿಂಗ್ ಸಚಿವರಿಗೆ ಕೆಲವು ಸೂಚನೆಗಳನ್ನು  ನೀಡಿದ್ದಾರೆ. ಇಲಾಖೆಗಳಲ್ಲಿ ಹೊಸ ಹೊಸ ಕಾರ್ಯಕ್ರಮಗಳನ್ನ ತರುವಂತೆ ಸೂಚಿಸಿದ್ದಾರೆ. ಇಲಾಖಾವಾರು ಉತ್ತಮವಾಗಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ ಎಂದರು.

Key words: Leadership- change – not – discussion –Minister- BC Patil.