ಪಿಯು ಕಾಲೇಜುಗಳಿಗೆ ಫೆ.15ರವರೆಗೆ ರಜೆ ವಿಸ್ತರಣೆ

Promotion

ಬೆಂಗಳೂರು,ಫೆಬ್ರವರಿ,12,2022(www.justkannada.in):  ರಾಜ್ಯದಲ್ಲಿ ಉಂಟಾಗಿರುವ ಹಿಜಾಬ್ ವಿವಾದದಿಂದಾಗಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ಈ ಮಧ್ಯೆ ಪಿಯು ಕಾಲೇಜುಗಳಿಗೆ ಫೆಬ್ರವರಿ 15ರವರೆಗೆ ರಜೆ ವಿಸ್ತರಣೆ ಮಾಡಲಾಗಿದೆ.

ಹಿಜಾಬ್ ವಿವಾದದಿಂದಾಗಿ ಈಗಾಗಲೇ ಪದವಿ ಕಾಲೇಜುಗಳಿಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಇದರ ಬೆನ್ನಲ್ಲೇ, ಪದವಿ ಪೂರ್ವ ಕಾಲೇಜುಗಳಿಗೆ ಫೆಬ್ರವರಿ 15ರವರೆಗೆ ರಜೆಯನ್ನು ಘೋಷಿಸಲಾಗಿದೆ.

ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು,  ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಫೆಬ್ರವರಿ 12, 13 ರ ಭಾನುವಾರ ರಜಾ ದಿನ ಸಹಿತವಾಗಿ ಫೆಬ್ರವರಿ 14, 15ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ ತಿಳಿಸಿದೆ.

Key words: Leave -extension – PU colleges