ಯಾರೂ ಯಾರಪ್ಪನ ಮನೆಯಿಂದ ಕೊಡುವುದಿಲ್ಲ: ಕೀಳುಮಟ್ಟದ ಭಾಷೆ ಬಳಕೆ ಬಿಡಿ – ಸಚಿವ ಬಿ.ಸಿ.ಪಾಟೀಲ್…

ಬೆಂಗಳೂರು,ಏಪ್ರಿಲ್,3,2021(www.justkannada.in):  ಯಾರೂ ಯಾರಪ್ಪನ ಮನೆಯಿಂದ ಕೊಡುವುದಿಲ್ಲ ಎಲ್ಲರೂ ಸರ್ಕಾರದಿಂದಲೇ ಕೊಡುವುದು ಎಂಬುದು ಸಿದ್ದರಾಮಯ್ಯನವರ ಗಮನದಲ್ಲಿರಲಿ. ಸನ್ಮಾನ್ಯ ಸಿದ್ಧರಾಮಯ್ಯನವರೇ ನಿಮ್ಮ ಟೀಕೆಗಳು ಕ್ರಿಯಾತ್ಮಕವಾಗಿರಬೇಕೇ ಹೊರತು ಕೀಳುಮಟ್ಟದಲ್ಲಿ ಅಲ್ಲ. ಕೀಳುಮಟ್ಟದ ಭಾಷೆಯನ್ನು ಬಳಸುವುದರಿಂದ ಜನಾನುರಾಗಿ ಆಗುತ್ತೇನೆ ಎಂದು ನೀವು ಭಾವಿಸಿದ್ದರೆ ಅದು ತಪ್ಪು  ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.Illegally,Sand,carrying,Truck,Seized,arrest,driver

ನಿಮ್ಮ ಕಾಲದಲ್ಲಿ ಕೊಡುತ್ತಿದ್ದಂತೆಯೇ  ಈಗಲೂ ಕೂಡ ಪಡಿತರ ವ್ಯವಸ್ಥೆ ಅದೇ ಮುಂದುವರಿದಿದೆ. ಆದರೆ 2 ಕೆಜಿ ಅಕ್ಕಿ ಮಾತ್ರ ಕಡಿಮೆಯಾಗಿದೆ. ಆದರೆ ಈ ಕೋವಿಡ್  ಮತ್ತು ನೆರೆ ಪ್ರವಾಹ ಪರಿಸ್ಥಿತಿಯಲ್ಲಿಯೂ ಕೂಡ ಕಿಸಾನ್ ಸಮ್ಮಾನ್  ಯೋಜನೆಯಲ್ಲಿ ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹತ್ತುಸಾವಿರ ರೂಪಾಯಿಗಳನ್ನು ಕೊಡುತ್ತಿರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ? ಕೋವಿಡ್ ಸಂಕಷ್ಟದ ಸಮಯದಲ್ಲಿ ಹತ್ತು ಲಕ್ಷ ರೈತರಿಗೆ ಪ್ರತಿಯೊಬ್ಬರಿಗೆ 5 ಸಾವಿರದಂತೆ ಮೆಕ್ಕೆಜೋಳಕ್ಕೆ ಪರಿಹಾರ ಕೊಟ್ಟಿರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ? ಈ ರೀತಿ ಕೀಳು ಮಟ್ಟದ ಪ್ರಚಾರವನ್ನು ನಿಲ್ಲಿಸುವುದು ಒಳ್ಳೆಯದು ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.leave-substandard-language-use-former-cm-siddaramaiah-minister-b-c-patil

ಜನರಿಗೆ ಅಕ್ಕಿ ಕೊಡುತ್ತಿದ್ದೆವು ಎಂದು ಹೇಳುವ ಸಿದ್ದರಾಮಯ್ಯನವರು ಈ ಅಕ್ಕಿಯನ್ನು ಯಾರೂ ಸಹ ಯಾರಪ್ಪನ ಮನೆಯಿಂದ ಕೊಡುವುದಿಲ್ಲ ಎಂಬುದನ್ನು ತಿಳಿಯಬೇಕು. ಕೀಳುಮಟ್ಟದ ಮಾತು ಭಾಷಾ ಪ್ರಯೋಗದಿಂದ ಸರ್ಕಾರವನ್ನು ಟೀಕಿಸಿದ್ದ ಮಾತ್ರಕ್ಕೆ ಸಿದ್ದರಾಮಯ್ಯ ಜನಾನುರಾಗಿಗಳಾಗುತ್ತಾರೆ ಎಂದು ಒಂದು ವೇಳೆ ಭಾವಿಸಿದ್ದರೆ ಅದು ಅವರ ತಪ್ಪುಕಲ್ಪನೆ ಹಾಗೂ ಮೂರ್ಖತನವಾಗುತ್ತದೆ. ಬಿಜೆಪಿ ಸರ್ಕಾರ ಬಿಪಿಎಲ್ ಕಾರ್ಡುದಾರ ಪ್ರತಿಯೊಬ್ಬರಿಗೆ 5 ಕೆ.ಜಿ ಅಕ್ಕಿ 1 ಕಾರ್ಡಿಗೆ 2 ಕೆ.ಜಿ. ಗೋಧಿ ನೀಡುತ್ತದೆ. ಅಂತ್ಯೋದಯ ಕಾರ್ಡಿಗೆ 35 ಕೆ.ಜಿ ಅಕ್ಕಿಯನ್ನು ಈ ಮೊದಲಿನಂತೆಯೇ ನೀಡುತ್ತಿದೆ.  ಕೇವಲ ಪ್ರಚಾರಕ್ಕಾಗಿಯೋ ಅಥವಾ ಕ್ರಿಯಾಶೀಲರಾಗಿದ್ದೇವೆ ಎಂದು ತೋರಿಸಿಕೊಳ್ಳಲೋ ಅಥವಾ ಸರ್ಕಾರವನ್ನು ಉದ್ದೇಶಪೂರಕವಾಗಿ ಟೀಕಿಸಲೇಬೇಕಂತಲೋ ಟೀಕಿಸಬಾರದು. ಮುಖ್ಯಮಂತ್ರಿಗಳ ವಿರುದ್ಧ ಕೀಳುಮಟ್ಟದ ಭಾಷೆ ಬಳಸುವುದನ್ನು ಬಿಡಬೇಕು  ಎಂದು ಸಚಿವ ಬಿ.ಸಿ ಪಾಟೀಲ್ ಗುಡುಗಿದರು.

Key words:  Leave –substandard- language- use-former CM-siddaramaiah-Minister -B.C. Patil.