ಬಿಜೆಪಿಯಿಂದ ಲೀಗಲ್ ನೋಟಿಸ್: ಪ್ರತಿಯಾಗಿ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

kannada t-shirts

ಮೈಸೂರು,ಆ,4,2020(www.justkannada.in): ಕೊರೊನಾ ನಿಯಂತ್ರಣಕ್ಕೆ ಸರ್ಕಾರಕ್ಕೆ ಖರೀದಿಸಲಾದ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರಿಸುವುದನ್ನು ಬಿಟ್ಟು ಎಂಎಲ್ಸಿ ರವಿಕುಮಾರ್ ರವರ ಮೂಲಕ ಲೀಗಲ್ ನೋಟಿಸ್ ಕಳಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಎಚ್ಚರಿಕೆ ನೀಡಿದರು.jk-logo-justkannada-logo

ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಎಂ. ಲಕ್ಷ್ಮಣ್, ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆಸಿರುವ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಅದಕ್ಕೆ ಉತ್ತರಿಸುವುದನ್ನು ಬಿಟ್ಟು ಎಂಎಲ್ಸಿ ರವಿಕುಮಾರ್ ರವರ ಮೂಲಕ ಲೀಗಲ್ ನೋಟಿಸ್ ಕಳಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು  ಹೇಳಿದರು.

ಆರೋಗ್ಯ ಸಚಿವ ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಿ ಕೇವಲ 324 ಕೋಟಿ ಖರ್ಚಾಗಿದೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ನಮ್ಮ ಅಂದಾಜಿನ ಪ್ರಕಾರ ಉಪಕರಣಗಳ ಖರೀದಿಗೆ ಸರ್ಕಾರ 4200 ಕೋಟಿ ಖರ್ಚು ಮಾಡಿದೆ. ಅದರಲ್ಲಿ ಅರ್ಧದಷ್ಟು ಹಣವನ್ನು ನುಂಗಿದ್ದಾರೆ. ನಿಮಗೆ ಮಾನ ಮರ್ಯಾದೆ ಈ ಕೂಡಲೇ ತನಿಖೆಗೆ ಒಪ್ಪಿಕೊಳ್ಳಿ. ನಿಮಗೆ ನೈತಿಕತೆ ಇದ್ದರೆ ಹೈಕೋರ್ಟ್ ಜಡ್ಜ್ ಒಬ್ಬರನ್ನು ನೇಮಿಸಿ ಹಗರಣದ ಕುರಿತು ತನಿಖೆಗೆ ಒಪ್ಪಿಸುವಂತೆ ಎಂ ಲಕ್ಷ್ಮಣ್ ಆಗ್ರಹಿಸಿದರು.

ಇನ್ನು ಪೊಲೀಸರು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಆಡಳಿತ ಪಕ್ಷದ ಕೈಗೊಂಬೆಯಾಗಿ, ಬಿಜೆಪಿ ಪಕ್ಷದ ಏಜೆಂಟ್ ರೀತಿ ಪೊಲೀಸರು ವರ್ತಿಸುತ್ತಿದ್ದಾರೆ. ಇಂದು ಬಿಜೆಪಿ ಸರ್ಕಾರವಿರಬಹುದು ಆದರೆ ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಪೊಲೀಸ್ ಇಲಾಖೆ ಕುರಿತು ಲಕ್ಷ್ಮಣ್ ಅಸಮಾಧಾನ ವ್ಯಕ್ತಪಡಿಸಿದರು.

Key words: Legal notice –BJP- KPCC –spokesperson- M Laxman – warning – criminal case

website developers in mysore