ವಿಧಾನಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿದ ಸಭಾಪತಿ

ಬೆಂಗಳೂರು,ಫೆಬ್ರವರಿ,18,2022(www.justkannada.in):  ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಕಾಂಗ್ರೆಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದು ಈ ನಡುವೆ ಆಡಳಿತ ಪಕ್ಷ ಮತ್ತು  ವಿಪಕ್ಷಗಳ ನಡುವೆ ಗಲಾಟೆ ಹೆಚ್ಚಾದ  ಹಿನ್ನೆಲೆ ವಿಧಾನಪರಿಷತ್ ಕಲಾಪ ಸಭಾಪತಿ ಬಸವರಾಜ ಹೊರಟ್ಟಿ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ  ಮಾಡಿದರು.

ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ  ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಪರಿಷತ್ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಸಚಿವ ಈಶ್ವರಪ್ಪ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಲ ಬಿಜೆಪಿ ಸದಸ್ಯರು ಸದನದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.

ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ-ಕೋಲಾಹಲ ಹೆಚ್ಚಾಗುತ್ತಿದ್ದಂತೆ ಸಭಾಪತಿ ಹೊರಟ್ಟಿ, ವಿಧಾನಪರಿಷತ್ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ  ಮುಂದೂಡಿದರು.

Key words: Legislative council-congress-bjp