ವಿಧಾನ ಪರಿಷತ್ ಚುನಾವಣೆ: ಎಸ್.ಆರ್ ಪಾಟೀಲ್ ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರಣ ಕೊಟ್ಟ ಮಾಜಿ ಸಚಿವ ಹೆಚ್.ಕೆ ಪಾಟೀಲ್.

ಧಾರವಾಡ,ನವೆಂಬರ್,23,2021(www.justkannada.in):  ರಾಜ್ಯ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಈಗಾಗಲೇ  ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಮಧ್ಯೆ ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಅವರಿಗೆ ಟಿಕೆಟ್ ಕೈ ತಪ್ಪಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹೆಚ್.ಕೆ ಪಾಟೀಲ್, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವುದಕ್ಕೆ ತೀರ್ಮಾನವಾಗಿತ್ತು. ಹೀಗಾಗಿ ಎಸ್.ಆರ್  ಪಾಟೀಲ್ ಅವರಿಗೆ ಪರಿಷತ್ ಚುನಾವಣೆ ಟಿಕೆಟ್ ಕೈತಪ್ಪಿದೆ. ಟಿಕೆಟ್ ಹಂಚಿಕೆಯಲ್ಲಿ ಪೈಪೋಟಿ ಇದ್ದೆ ಇರುತ್ತದೆ. ಕೆಲವು ಕಡೆಗಳಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.drugs-mafia-hk-patil-defended-mla-jameer-ahmed-khan

ಇನ್ನು ಎಸ್ .ಆರ್ ಪಾಟೀಲ್ ಅವರಿಗೆ ಟಿಕೆಟ್ ಮಿಸ್ ಆಗಿದ್ದಕ್ಕೆ ಅವರ ಅಭಿಮಾನಿಗಳು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: legislative Council –election-  SR Patil -miss –ticket- Former minister- HK Patil