ಎಲ್ಲಾ ವರ್ಗಕ್ಕೆ ನ್ಯಾಯಸಮ್ಮತ ಮೀಸಲಾತಿ ನೀಡಲು ಬದ್ಧ-ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಬೆಂಗಳೂರು,ಮಾರ್ಚ್,10,2021(www.justkannada.in): ಎಲ್ಲಾ ವರ್ಗಕ್ಕೆ ನ್ಯಾಯಸಮ್ಮತ ಮೀಸಲಾತಿ ನೀಡಲು ಬದ್ಧ. ಕಾನೂನಿಗನುಗುಣವಾಗಿ ಮೀಸಲಾತಿ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.jk

ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮೀಸಲಾತಿ ಹೆಚ್ಚಳ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರಸ್ತುತ ರಾಜ್ಯದಲ್ಲಿ ವೀರಶೈವ ಲಿಂಗಾಯತ, ಪಂಚಮಸಾಲಿ, ಕುರುಬ, ವಾಲ್ಮೀಕಿ, ಪರಿಶಿಷ್ಟ ಜಾತಿ ಸೇರಿದಂತೆ ವಿವಿಧ ಸಮುದಾಯಗಳು ಮೀಸಲಾತಿಗಾಗಿ ಹೋರಾಟ ಮಾಡುತ್ತಿವೆ. ಯಾವುದೇ ಸಮುದಾಯ ವರ್ಗಕ್ಕೆ ಸೇರಿಸಲು ನಿಯಮವಿದೆ. ಸಂವಿಧಾನ ಕಾನೂನು ಚೌಕಟ್ಟಿನಲ್ಲಿ ಮಾಡಬೇಕು. ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಸಂವಿಧಾನ ತಜ್ಞರು ಹಾಗೂ ಆಡಳಿತ ತಜ್ಞರು ಸೇರಿದಂತೆ ಮತ್ತಿತರರ ಜತೆ ಸುದೀರ್ಘವಾಗಿ ಚರ್ಚೆ ನಡೆಸಲಾಗುವುದು. ಪ್ರತಿಯೊಂದು ಸಮುದಾಯಕ್ಕೆ ನ್ಯಾಯ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾವ , ಯಾವ ಸಮುದಾಯಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿವೆಯೋ ಎಲ್ಲರಿಗೂ ನ್ಯಾಯ ಒದಗಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು. legitimate -reservation - all classes-Home Minister- Basavaraja Bommai.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ ಮೀಸಲಾತಿಗಾಗಿ ಕೇಂದ್ರಕ್ಕೆ ಶಿಫಾರಸು ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗ ಇರುವುದರಿಂದ ಮತ್ತೊಂದು ಆಯೋಗ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಬಸವರಾಜ್ ಬೊಮ್ಮಾಯಿ  ತಿಳಿಸಿದರು.

Key words:  legitimate -reservation – all classes-Home Minister- Basavaraja Bommai.