ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ: 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ..

Promotion

ಬೆಳಗಾವಿ,ಆಗಸ್ಟ್,22,2022(www.justkannada.in):  ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು  ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಆದೇಶ ಹೊರಡಿಸಿದ್ದಾರೆ.  ನಗರದ ಗಾಲ್ಫ್ ಮೈದಾನದ ಪಕ್ಕದಲ್ಲೇ ಇರುವ ಹಿಂಡಲಗಾ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಖಾಸಗಿ ಬಸ್ ಚಾಲಕರೊಬ್ಬರ ಮೊಬೈಲ್‌ನಲ್ಲಿ ಚಿರತೆ ಚಲನವಲನ ಸೆರೆಯಾಗಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ.  ಖಾಸಗಿ ಶಾಲೆಯ ಕೂಗಳತೆ ದೂರದಲ್ಲೇ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆ ಪ್ರತ್ಯಕ್ಷ ಹಿನ್ನೆಲೆ ವಿದ್ಯಾರ್ಥಿಗಳು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.

ವೈರಲ್ ಆದ ವಿಡಿಯೋವನ್ನು ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ.

Key words: Leopard-sighting – Belagavi camp- area- leave-22 government – private -schools