ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳು ವಂಚಿತರಾದ ವಿಚಾರ: ಮತ್ತೆ ಅವಕಾಶ ನೀಡುವಂತೆ ಡಿವಿ ಸದಾನಂದಗೌಡರಿಂದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗೆ ಪತ್ರ…

ಬೆಂಗಳೂರು, ಮೇ,6,2019(www.justkannada.in):   ಹಂಪಿ ಎಕ್ಸ್‌ ಪ್ರೆಸ್ ರೈಲು ವಿಳಂಬದಿಂದಾಗಿ ನೀಟ್ ಪರೀಕ್ಷೆ ಬರೆಯಲಾಗದೆ ವಂಚಿತರಾದ ರಾಜ್ಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಮತ್ತೆ ಅವಕಾಶ ನೀಡಬೇಕೆಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಮನವಿ ಮಾಡಿದ್ದಾರೆ.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗೆ ಪತ್ರಬರೆದಿರುವ ಕೇಂದ್ರ ಸಚಿವ ಸದಾನಂದಗೌಡ ಅವರು,  ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ  ನೋವಿಗೆ ಸ್ಪಂದಿಸಿದ್ದಾರೆ.

ಹುಬ್ಬಳ್ಳಿಯಿಂದ ಹೊರಡುವ ಹಂಪಿ ಎಕ್ಸ್‌  ಪ್ರೆಸ್ ರೈಲು  ಬೆಂಗಳೂರಿಗೆ ಬೆಳಿಗ್ಗೆ 7 ಗಂಟೆಗೆ ತಲುಪಬೇಕಿತ್ತು. ನೀಟ್ (ಎನ್‌ಇಇಟಿ) ಪರೀಕ್ಷೆ ಮಧ್ಯಾಹ್ನ 2 ಗಂಟೆಗೆ ಆರಂಭವಾಗಿ ಸಂಜೆ 5 ಗಂಟೆಗೆ ಮುಗಿಯುವಂತೆ ವೇಳಾಪಟ್ಟಿ ನಿಗದಿಪಡಿಸಲಾಗಿತ್ತು. ಮಧ್ಯಾಹ್ನ 1.30ಕ್ಕೆ ಪರೀಕ್ಷಾ ಕೊಠಡಿ ಪ್ರವೇಶಿಸಬೇಕಿತ್ತು. ಆದರೆ, ರೈಲು ಬೆಂಗಳೂರಿಗೆ ತಲುಪಿದ್ದೇ ಮಧ್ಯಾಹ್ನ ಸುಮಾರು 2.30ರ ವೇಳೆಗೆ. ಆ ವೇಳೆಗಾಗಲೇ ಪರೀಕ್ಷೆಗಳು ಆರಂಭವಾಗಿದ್ದವು.  ಹೀಗಾಗಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗಿದ್ದರು.

Key words: Letter -DV Sadananda Gowda – Union Minister- Prakash Javadekar – allow- students -NET examination