ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಎಂಬುದು ಸುಳ್ಳು- ಬಿವೈ ವಿಜಯೇಂದ್ರ ಟೀಕೆ.

Promotion

ಚಿಕ್ಕಬಳ್ಳಾಪುರ,ಫೆಬ್ರವರಿ,12,2024(www.justkannada.in): ಕರ್ನಾಟಕ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಎಂಬುದು ಸುಳ್ಳು.  ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ,  ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸಾಕಷ್ಟು ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೇರಿರುವ ಕಾಂಗ್ರೆಸ್ ಯಾವುದೇ ಅಭಿವೃದ್ದಿ ಕಾರ್ಯಗಳನ್ನ ಮಾಡಿಲ್ಲ ರಾಜ್ಯದಲ್ಲಿ ಈವರೆಗೆ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ  ಒಬ್ಬ ರೈತಕೂಡ ಮೃತಪಟ್ಟಿಲ್ಲ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದಾರೆ. ರೈತರ ಪಂಪ್​​ಸೆಟ್​ಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದನ್ನು ಮರೆಮಾಚಲು ಕೇಂದ್ರದತ್ತ ಬೊಟ್ಟು ಮಾಡುತ್ತಿದೆ. ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಈ ಎಲ್ಲ ವಿಚಾರಗಳಿಗೆ ಜನರು ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: lie -guarantee schemes – model – whole country- BY Vijayendra