ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್.

Promotion

ಬೆಂಗಳೂರು,ನವೆಂಬರ್,18,2021(www.justkannada.in):  ರಾಜ್ಯ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.

ರಾಜ್ಯದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು  ಚುನಾವಣೆ ನಡೆಯಲಿದ್ದು ಈ ಸಂಬಂಧ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಕುರಿತಂತೆ ಚರ್ಚೆಯಾಗಿದೆ. ಈ ಚರ್ಚೆಯಂತೆ ಅಭ್ಯರ್ಥಿಗಳ ಪಟ್ಟಿ ಕೂಡ ಫೈನಲ್ ಮಾಡಲಾಗಿದ್ದು, ದೆಹಲಿಗೆ  ಅಭ್ಯರ್ಥಿಗಳ ಪಟ್ಟಿ ಕಳುಹಿಸಿ ಕೊಡಲಾಗಿದೆ ಎಂದು ತಿಳಿಸಿದರು.

ಇಂದು ಸಂಜೆ ಅಥವಾ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಬಳಿಕ ಅಭ್ಯರ್ಥಿಗಳು ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯಲಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

Key words: List – BJP candidates -released -this evening – tomorrow- Former CM -Jagdish Shettar.