“ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ” : ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ

kannada t-shirts

ಬೆಂಗಳೂರು,ಜನವರಿ,23,2021(www.justkannada.in) : ಯಾರೋ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಮಂಡ್ಯ ಪೊಲೀಸರು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿರುವುದು ಇಡೀ ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದ್ದಾರೆ.jkನರೇಂದ್ರ ಮೋದಿಯವರ ಸರ್ಕಾರ ಆರಂಭದಲ್ಲಿ ಧರ್ಮರಾಯನಂತೆ ಇತ್ತು. ಈಗ ದುರ್ಯೋಧನನ ಸರ್ಕಾರವಾಗಿದೆ ಎಂದು ಹಂಪನಾ ಅವರು ಹೇಳಿದ್ದಾರೆ. ಇದರಲ್ಲಿ ಮಾನಹಾನಿಯಾಗುವ ಅಂಶ ಏನಿದೆ? ಎಂದು ಪ್ರಶ್ನಿಸಿದ್ದಾರೆ. ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದ್ದೇವೆಯೋ ಅಥವಾ ಇಲ್ಲವೋ ಎಂಬ ಅನುಮಾನ ಇದರಿಂದ ಉಂಟಾಗಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ದೇಶದ ಪ್ರತಿಯೊಬ್ಬ ನಾಗರಿಕರಿಗೂ ಅವರ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ಹಕ್ಕು ಇದೆ. ಯಾರೂ ಅದನ್ನು ನಿಯಂತ್ರಿಸಲು ಆಗದು ಎಂದು ಕಿಡಿಕಾರಿದ್ದಾರೆ.

ಹಂ.ಪಾ.ನಾಗರಾಜಯ್ಯ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ. ಯಾರೋ ದೂರು ಕೊಟ್ಟರು ಎಂಬ ಕಾರಣಕ್ಕೆ ಹಿರಿಯ ಸಾಹಿತಿಯನ್ನು ಠಾಣೆಗೆ ಕರೆಯಿಸಿಕೊಂಡು ವಿಚಾರಣೆ ನಡೆಸುವುದು ಪ್ರಜಾಸತ್ತೆಗೆ ಮಾಡಿದ ಅವಮಾನ. ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಯಡಿಯೂರಪ್ಪ ಅವರಿಗೆ ಗೌರವ ಇದ್ದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸೌಮ್ಯ ರೆಡ್ಡಿ ಅವರ ವಿರುದ್ಧ ನೀಡಿರುವ ದೂರುಗಳ ಸ್ವೀಕಾರ ಮಾಡಿ ತನಿಖೆ ಜರುಗಿಸಲಿ.

ಬೆಂಗಳೂರಿನಲ್ಲಿ ಇತ್ತೀಚೆಗೆ ಕಾಂಗ್ರೆಸ್ ನಡೆಸಿದ ರಾಜಭವನ ಚಲೋ ವೇಳೆ ನಡೆದ ಘಟನೆ ಸಂಬಂಧ ಶಾಸಕರಾದ ಸೌಮ್ಯ ರೆಡ್ಡಿಯವರೇ ದೂರು ನೀಡಿದ್ದಾರೆ. ಆ ದೂರು ಏನಾಯಿತು. ಸೌಮ್ಯ ರೆಡ್ಡಿ ಹಾಗೂ ಅವರ ವಿರುದ್ಧ ನೀಡಿರುವ ದೂರುಗಳನ್ನೂ ಸ್ವೀಕಾರ ಮಾಡಿ ತನಿಖೆ ಜರುಗಿಸಲಿ. ಸೌಮ್ಯರೆಡ್ಡಿ ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಅದು ಅವರ ದೊಡ್ಡಗುಣ ಎಂದಿದ್ದಾರೆ.

28ರಂದು ಕಾಂಗ್ರೆಸ್ ಶಾಸಕಾಂಗ ಸಭೆ

ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 28 ರಂದು ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ವಿಧಾನ ಪರಿಷತ್ ಉಪ ಸಭಾಪತಿ ಚುನಾವಣೆಗೆ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಅಂದು ತೀರ್ಮಾನ ಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿಯ ಎಡಗೈ ಗುಂಪಿನ ನಾಯಕರಿಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ನೀಡಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

ಈಶ್ವರಪ್ಪ ಅವರಿಗೆ ಕಾನೂನು ಗೊತ್ತಿಲ್ಲ  

ತಾಲೂಕು ಪಂಚಾಯಿತಿ ವ್ಯವಸ್ಥೆಯನ್ನು ಸುಲಭವಾಗಿ ರದ್ದುಗೊಳಿಸಲಾಗದು. ಅದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರಲಾಗದು. ಈಶ್ವರಪ್ಪ ಅವರಿಗೆ ಕಾನೂನು ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಪ್ರಳಯವಾದರೂ ಸರಿ, ವಲಸಿಗರನ್ನು ಕಾಂಗ್ರೆಸ್‍ಗೆ ಮತ್ತೆ ಸೇರಿಸುವುದಿಲ್ಲCAA –NRC- issue-attack - JNU - government-formercm- Siddaramaiahಬಿಜೆಪಿಗೆ ವಲಸೆ ಹೋದವರಿಗೆ ಈಗ ಅತೃಪ್ತಿ ಕಾಡುತ್ತಿದೆ. ವಲಸೆ ಹೋದವರು ಮೊದಲು ಯಡಿಯೂರಪ್ಪ ಅವರನ್ನು ಮಾತು ತಪ್ಪದ ಮಗ ಎಂದು ಹಾಡಿ ಹೊಗಳುತ್ತಿದ್ದರು. ಈಗ ನಾಲಿಗೆ ಇಲ್ಲದ ನಾಯಕ ಎನ್ನುತ್ತಿದ್ದಾರೆ. ಪ್ರಳಯವಾದರೂ ಸರಿ, ವಲಸಿಗರನ್ನು ಕಾಂಗ್ರೆಸ್‍ಗೆ ಮತ್ತೆ ಸೇರಿಸುವುದಿಲ್ಲ ಎಂದು ಹೇಳಿದ್ದೆ. ಅದಕ್ಕೆ ಈಗಲೂ ಬದ್ಧನಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

key words : Literature-circle-Shame-Former CM-Siddaramaiah

website developers in mysore