ಲಿವರ್ ಸಮಸ್ಯೆ: ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

ಮುಂಬೈ, ಅಕ್ಟೋಬರ್ 18, 2019 (www.justkannada.in): ಬಾಲಿವುಡ್ ಮೆಗಾ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಮತ್ತೆ ಲಿವರ್ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಿಲಾಗಿದ್ದಾರೆ.

ಮಂಗಳವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಮಿತಾಭ್ ಅವರನ್ನು ರೂಟಿನ್ ಚೆಕಪ್ ಗಾಗಿ ನಾನವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಭಾನುವಾರ ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಅಮಿತಾಭ್ ಅವರ ಲಿವರ್ ನ ಶೇ.75ರಷ್ಟು ಈಗಾಗಲೇ ಹಾನಿಯಾಗಿದೆ ಎಂದು ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದರು. ತಾನು ಕೇವಲ 25% ಲಿವರ್ ನಲ್ಲೇ ಬದುಕುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು.