ರಾಜ್ಯದಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು,ನವೆಂಬರ್,4,2021(www.justkannada.in): ಕೊರೋನಾ ಕಡಿಮೆಯಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ ಕಾಲೇಜುಗಳು ಆರಂಭವಾಗಿದ್ದು,  ಈ ನಡುವೆ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್‌ಸಿಗ್ನಲ್  ನೀಡಿದೆ.

ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. LKG, UKG ಭೌತಿಕ ತರಗತಿ ಆರಂಭಕ್ಕೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಗೈಡ್‌ಲೈನ್ಸ್ ರಿಲೀಸ್‌ ಆಗಿದೆ.

LKG ಹಾಗೂ UKG ಕೇಂದ್ರವನ್ನು ಸ್ವಚ್ಛಗೊಳಿಸಬೇಕು. ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ. ಪೋಷಕರಿಗೂ ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ ಆಗಿರಬೇಕು. ಶಾಲೆಗೆ ಹಾಜರಾಗುವ ಎಲ್ಲಾ ಶಿಕ್ಷಕರು, ಇತರೆ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ವಹಿಸುವುದು. ಶಿಕ್ಷಕರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. ಮಕ್ಕಳಿಗೆ ಮನೆಯಿಂದಲೇ ಉಪಹಾರ, ಕುಡಿಯುವ ಶುದ್ಧನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ಸೂಚಿಸುವುದು. ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡುವುದು.

ದಿನಾಂಕ 08-11-2021ರಿಂದ ಅರ್ಧ ದಿನ ಎಲ್ಲಾ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸುವುದು. ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಸದರಿ ತರಗತಿಗಳನ್ನು ಭೌತಿಕವಾಗಿ ಪ್ರಾರಂಭಿಸುವುದು. ಶಾಲೆ ಪ್ರಾರಂಭಕ್ಕೂ ಮುನ್ನಾ ಸೋಂಕು ನಿವಾರಕ ದ್ರಾವಣಗಳಿಂದ ಶುದ್ಧೀಕರಿಸುವುದು, ಸ್ಯಾನಿಟೈಸ್ ಮಾಡುವುದು.

ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ LKG, UKG ಭೌತಿಕ ತರಗತಿಗಳು ಶುರು ಆಗಲಿವೆ. ಬೆಳಗ್ಗೆ 9.39 ರಿಂದ ಮಧ್ಯಾಹ್ನ 3.39 ರವರೆಗೆ ತರಗತಿ ನಡೆಸಬೇಕು ಎಂದು ಹೇಳಲಾಗಿದೆ. ಕೊವಿಡ್ ಲಕ್ಷಣ ಇರೊ ಮಕ್ಕಳಿಗೆ Lkg ಹಾಗೂ Ukg ಪ್ರವೇಶ ಇಲ್ಲ ಎಂದೂ ತಿಳಿಸಲಾಗಿದೆ.

Key words: LKG –UKG- open-government -green signal