ಸ್ಮಾರ್ಟ್ ಸಿಟಿ ಕಾಮಗಾರಿಗಳ ಸ್ಥಳ ಪರಿಶೀಲನೆ: ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ

ಬೆಂಗಳೂರು, ಜನವರಿ 30,2021(www.justkannada.in): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.Location- Inspection -Smart City –Works-CM BS yeddyurappa.

ಈ ಸಂದರ್ಭದಲ್ಲಿ ಅವರು ಈ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳು ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹೇಯ್ನ್ ಸ್ ರಸ್ತೆ, ಹುಡ್ ಸ್ಟ್ರೀಟ್, ಟಾಟಾ ಲೇನ್ , ಕ್ಯಾಪಿಟಲ್ ಹೋಟೆಲ್-ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನಲ್ಲಿ 37 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲಿ ರಸ್ತೆ ಅಭಿವೃದ್ಧಿ, ಕೋವಿಡ್ ಆಸ್ಪತ್ರೆಗಳಿಗೆ ನೆರವು, ಐಟಿ-ಯೋಜನೆಗಳು, ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿಗಳು ಸೇರಿವೆ. ಇದರ ಅಂದಾಜು ವೆಚ್ಚ 930 ಕೋಟಿ ರೂ.ಗಳಾಗಿದೆ.

ಈವರೆಗೆ 4 ಕಾಮಗಾರಿಗಳು ಪೂರ್ಣಗೊಂಡಿವೆ. 29 ಕಾಮಗಾರಿಗಳು ಪ್ರಗತಿಯಲ್ಲಿವೆ. 4 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ವರೆಗೆ 103 ಕೋಟಿ ರೂ. ವೆಚ್ಚವಾಗಿದೆ. ಈ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿಯನ್ನು ಖಾತರಿಪಡಿಸುವಂತೆ ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ ನೀಡಿದ್ದಾರೆ.

Key words: Location- Inspection -Smart City –Works-CM BS yeddyurappa.