ಲಾಕ್ ಡೌನ್ ವಿಸ್ತರಣೆ ಮಾಡಿದ್ರೆ ಒಳ್ಳೆಯದು- ಸಚಿವ ಮುರುಗೇಶ್ ನಿರಾಣಿ…

Promotion

ಕಲ್ಬುರ್ಗಿ,ಮೇ,17,2021(www.justkannada.in):  ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈಗಾಗಲೇ ಮೇ 24ರವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದು ಈ ನಡುವೆ ಕೋವಿಡ್ ತಡೆಗಾಗಿ ಲಾಕ್ ಡೌನ್ ವಿಸ್ತರಣೆ ಮಾಡಿದರೇ ಒಳ್ಳೆಯದು ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.jk

ಈ ಕುರಿತು ಕಲ್ಬುರ್ಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಕೊರೋನಾ ತಡೆಗೆ 10 ದಿನಗಳ ಕಾಲ ಲಾಕ್ ಡೌನ್ ಮಾಡಿದರೇ ಉತ್ತಮ. ಈ ಬಗ್ಗೆ ಸಿಎಂಗೆ ತಿಳಿಸಿದ್ದೇವೆ. ಆದರೆ ಸರ್ಕಾರ ಕೈಗೊಳ್ಳುವ ನಿರ್ಧಾರ ಅಂತಿಮವಾಗಲಿದೆ ಎಂದು ಹೇಳಿದರು.lockdown-extension-good-corona-control-minister-murugesh-nirani

ಕಳೆದ 3 ದಿನಗಳಿಂದ ಕೊರೋನಾ ಸ್ವಲ್ಪ ಕಡಿಮೆಯಾಗಿದೆ. ಆದರೇ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ. ತಜ್ಞರು ಕೊಟ್ಟ ಸಲಹೆಯನ್ನು ಜಾರಿ ಮಾಡುತ್ತೇವೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

Key words: Lockdown- extension –good-corona control-Minister -Murugesh Nirani.