ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ: ಫೇಸ್’ಬುಕ್ ಲೈವ್’ನಲ್ಲಿ ಸಿಎಂ ಯಡಿಯೂರಪ್ಪ

Promotion

ಬೆಂಗಳೂರು, ಜುಲೈ 21, 2020 (www.justkannada.in): ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ ಎಂದು ಫೇಸ್’ಬುಕ್ ಲೈವ್’ನಲ್ಲಿ ಸಿಎಂ ಯಡಿಯೂರಪ್ಪ ಹೇಳಿದರು.

ಜನ ಎಚ್ಚೆತ್ತುಕೊಳ್ಳದ ಹೊರತು ಕೊರೊನಾ ಸೋಂಕಿನ ನಿಯಂತ್ರಣ ಸಾಧ್ಯವಿಲ್ಲ. ಹೀಗಾಗಿ ಎಲ್ಲರೂ ಸರಕಾರದೊಂದಿಗೆ ಕೈ ಜೋಡಿಸಬೇಕು. ಎಲ್ಲ ಕಡೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು ಎಂದು ಹೇಳಿದರು.

ಕೋವಿಡ್ ನಿಯಂತ್ರಣಕ್ಕೆ ಸರಕಾರ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಲಾಕ್ ಡೌನ್ ಗೆ ಒಂದಷ್ಟು ವಿನಾಯಿತಿ ನೀಡಿದ ಸಮಯದಲ್ಲಿ ಮುಂಬೈ ಸೇರಿದಂತೆ ಹೊರ ರಾಜ್ಯಗಳಿಂದ ಬಂದವರಿಂದ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ. ಆದರೀಗ ಈ ಕುರಿತು ಮುನ್ನೆಚ್ಚರಿಕೆ ಕ್ರಮ ವಹಿಸಲಾಗುವುದು ಎಂದು ಸಿಎಂ ತಿಳಿಸಿದರು.