ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ…

ಕೊಪ್ಪಳ,ಏಪ್ರಿಲ್,12,2021(www.justkannada.in):  ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ  ಹೇಳಿದ್ದಾರೆ.Agriculture,Pumpset,Adequate,Electricity,giving,Ask,Protest 

ಈ ಕುರಿತು  ಇಂದು ಮಾಧ್ಯಮಗಳ ಜತೆ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ. ನಿನ್ನೆ ಒಂದೇ ದಿನ 10 ಸಾವಿರಕ್ಕೂ ಅಧಿಕ ಕೇಸ್ ಬಂದಿವೆ. ಸರ್ಕಾರ ಬಿಗಿ ಕ್ರಮ ಕೈಗೊಳ್ಳದಿದ್ದಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ ಎಂದು ವಾಗ್ದಾಳಿ ನಡೆಸಿದರು.

Lockdown - not - solution - corona control-Former CM -Siddaramaiah.
ಕೃಪೆ-internet

ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಮಾಡುತ್ತಿಲ್ಲ. ಹೀಗಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಸಿದ್ಧರಾಮಯ್ಯ ತಿಳಿಸಿದರು.

Key words: Lockdown – not – solution – corona control-Former CM -Siddaramaiah.