ಕೊಳ್ಳೇಗಾಲದಲ್ಲಿ ಲೋಕಾಯುಕ್ತ ದಾಳಿ: ಕಾರ್ಮಿಕ ಇಲಾಖೆ ಅಧಿಕಾರಿ ಪರಾರಿ

ಚಾಮರಾಜನಗರ, ಮಾರ್ಚ್ 04, 2023 (www.justkannada.in): ಕಾರ್ಮಿಕ ಇಲಾಖೆ ನಿರೀಕ್ಷಕ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಕಚೇರಿಯಿಂದ ಪರಾರಿಯಾಗಿದ್ದಾನೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಈ ಘಟನೆ ನಡೆದಿದೆ. ಕೊಳ್ಳೇಗಾಲದ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು ಪರಾರಿಯಾದ ಅಧಿಕಾರಿ ಎಂದು ಗುರುತಿಸಲಾಗಿದೆ.

ಹನೂರು ತಾಲೂಕಿನ ರಾಮಾಪುರ ಗ್ರಾಮದ ಕಬ್ಬಿಣದ ಅಂಗಡಿ ವ್ಯಾಪಾರಿ ಲಕ್ಷ್ಮಣ್ ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಹಾಕಿದ ವೇಳೆ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಇವರ ಜತೆಗೆ ಮತ್ತೊಬ್ಬ ವ್ಯಾಪಾರಿಯೂ ಅಧಿಕಾರಿಯ ಲಂಚದಾಹದಿಂದ ಬೇಸತ್ತು ಲೋಕಾಯುಕ್ತರಿಗೆ ದೂರು ನೀಡಿದ್ದರು ಎನ್ನಲಾಗಿದೆ. ದೂರು ಪಡೆದ ಲೋಕಾಯುಕ್ತರು ಕಾರ್ಯಾಚರಣೆ ನಡೆಸಿದ್ದರು.