ಬೈಕ್ ಗೆ ಲಾರಿ ಡಿಕ್ಕಿ: ದಂಪತಿ ಮತ್ತು ಮಗು ಸ್ಥಳದಲ್ಲೇ ದುರ್ಮರಣ.

Promotion

ಬಳ್ಳಾರಿ,ಆಗಸ್ಟ್,24,2022(www.justkannada.in):  ಬೈಕ್ ಗೆ ಲಾರಿ ಡಿಕ್ಕಿಯಾಗಿ  ದಂಪತಿ ಮತ್ತು ಮಗು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಕೌಲ್​ಬಜಾರ್ ಫ್ಲೈಓವರ್ ಮೇಲೆ ಈ ಅಪಘಾತ ಸಂಭವಿಸಿದೆ. ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ಮಗು ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದು. ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದಿದ್ದಾರೆ.  ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

Key words:  lorry -collided – bike-couple – child -died -on the spot.