“ಲಾರಿ, ಕ್ಯಾಂಟರ್ ಡಿಕ್ಕಿ,ಇಬ್ಬರು ಸ್ಥಳದಲ್ಲೇ ಸಾವು”

ಚಿತ್ರದುರ್ಗ,ಜನವರಿ,17,2021(www.justkannada.in) :  ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್​​ಗೆ ಲಾರಿ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.jk-logo-justkannada-mysoreಘಟನೆಯಲ್ಲಿ ಕುಮಾರ(24), ವಿಜಯ್(28) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದು ಅವರನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.Lorry,canter,collision,two,deaths,spot

ಬೆಳಗಿನ ಜಾವ ಕ್ಯಾಂಟರ್ ನಿಲ್ಲಿಸಿ ಟೀ ಕುಡಿಯುತ್ತಿದ್ದ ವೇಳೆ ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ, ಹಿಂಬದಿಯೊಂದ ಢಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣವೆನ್ನಲಾಗಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

key words : Lorry-canter-collision-two-deaths-spot