ಸಿಎಂ ಬಿಎಸ್ ವೈರಿಂದ ಈ ರೀತಿಯ ಕೀಳುಮಟ್ಟದ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ

kannada t-shirts

ಮೈಸೂರು,ಜೂ,10,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಸರ್ಕಾರ ಅನುಮತಿ ನೀಡದ ಹಿನ್ನಲೆ ಸರ್ಕಾರದ ವಿರುದ್ದ ಕಿಡಿಕಾರಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯ ಸರ್ಕಾರ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ಸಿಎಂ ಬಿಎಸ್ ಯಡಿಯೂರಪ್ಪರಿಂದ ಈ ರೀತಿಯ ಕೀಳುಮಟ್ಟದ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ದೆಹಲಿಯಲ್ಲಿ ಅಮಿತ್ ಶಾಗೆ ಒಂದು ರೂಲ್ಸ್. ನಮಗೆ ಒಂದು ರೂಲ್ಸ್ ಹಾ.?ಎಂದು ಪ್ರಶ್ನಿಸಿದರು. ನಾವು ಸಾಮಾಜಿಕ ಅಂತರ ಕಾಯ್ದುಕೊಂಡೆ ಕಾರ್ಯಕ್ರಮ ನಡೆಸುತ್ತಿದ್ದೇವು. ಮೊದಲ ಮೌಖಿಕವಾಗಿ ಕೇಳಿದಾಗ ಸರ್ಕಾರ ಒಪ್ಪಿತ್ತು. ಪತ್ರದ ಮೂಲಕ ಅನುಮತಿ ಕೇಳಿದಾಗ ಅನುಮತಿ ನಿರಾಕರಿಸಲಾಗಿದೆ. ಇದನ್ನ ನಾವು ರಾಜಕೀಯವಾಗೆ ಎದುರಿಸುತ್ತೇವೆ. ಇನ್ನೊಮ್ಮೆ ಪತ್ರ ಕೊಡುವುದಾಗಲಿ, ಮನವಿ ಮಾಡುವುದಾಗಲಿ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಸಂಘಟನೆ ಆಗುತ್ತದೆ ಎಂಬ ಆತಂಕದಲ್ಲಿ ಈ ರೀತಿ ಕೀಳು ಮಟ್ಟದ ರಾಜಕಾರಣ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.low-level-politics-cm-bs-yeddyurappa-mysore-former-cm-siddaramaiah

ಎಸ್ ಎಸ್ ಎಲ್ ಸಿ ಪರೀಕ್ಷೆ ಬೇಡ ಎಂಬುದಕ್ಕೆ ನನ್ನ ವಿರೋಧ ಇದೆ….

SSLC ಪರೀಕ್ಷೆ ಬೇಕೋ ಬೇಡವೋ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಪರೀಕ್ಷೆ ಬೇಡ ಎಂಬುದಕ್ಕೆ ನನ್ನ ವಿರೋಧ ಇದೆ. ಪರೀಕ್ಷೆ ಮಾಡಬೇಕು. ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡು ಪರೀಕ್ಷೆ ನಡೆಸಲಿ. ಪರೀಕ್ಷೆ ನಡೆಸುವುದು ಬೇಡ ಎನ್ನುವುದು ಸರಿಯಲ್ಲ ಎಂದು ಹೇಳಿದರು.

ದಾಖಲಾತಿ ಶುಲ್ಕ ಕಡಿಮೆ‌ ಮಾಡಬೇಕೆಂಬ ವಿಚಾರ ಸಂಬಂಧ  ಸರ್ಕಾರ ಎಲ್ಲವನ್ನು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲಿ. ಖಾಸಗಿ ಶಾಲೆಗಳಲ್ಲೂ ಬಡ ಮಕ್ಕಳು ಓದುತ್ತಿದ್ದಾರೆಂದು ಗಮನಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.

Key words: low level- politics – CM BS yeddyurappa-mysore- Former CM- Siddaramaiah

website developers in mysore