ಚಂದ್ರಗ್ರಹಣ ಹಿನ್ನೆಲೆ : ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ.

Promotion

ದಕ್ಷಿಣ ಕನ್ನಡ,ಅಕ್ಟೋಬರ್,26,2023(www.justkannada.in):  ನಾಳೆ ಚಂದ್ರಗ್ರಹಣ ಹಿನ್ನೆಲೆ  ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಶನಿವಾರ ರಾತ್ರಿ 01.04 ಗಂಟೆಗೆ ಗ್ರಹಣ ಸ್ಪರ್ಶವಾಗಿ ರಾತ್ರಿ 02.24 ಗಂಟೆಗೆ ಗ್ರಹಣ ಮೋಕ್ಷ ಪ್ರಾಪ್ತಿಯಾಗಲಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು ಸಂಜೆ 6.30ರ ಬಳಿಕ ದೇವರ ದರ್ಶನ ಬಂದ್ ಆಗಲಿದೆ. ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ ಸೇವೆಯೂ ಬಂದ್ ಎಂದು ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.

Key words: Lunar Eclipse – Change – time – darshan – Kukke Subrahmanya temple