ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ವರಿಷ್ಠರಿಂದ ತೀರ್ಮಾನ- ಸಿಎಂ ಬೊಮ್ಮಾಯಿ.

ಚಿತ್ರದುರ್ಗ,ಮಾರ್ಚ್,4,2023(www.justkannada.in): ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದಿಂದ  ಮಾಡಾಳ್ ವಿರೂಪಾಕ್ಷಪ್ಪ  ಉಚ್ಛಾಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಕ್ರಿಯಿಸಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ  ನೀಡುವ ಬಗ್ಗೆ ವರಿಷ್ಠರಿಂದ ತೀರ್ಮಾನವಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಕಾಲದಲ್ಲಿ ಅತಿ ಹೆಚ್ಚು ಕೊಲೆಗಳಾದವು. ಜಾತಿ, ಧರ್ಮ, ರಾಜಕೀಯ ದ್ವೇಷದ ಕಾರಣಕ್ಕೆ ಕೊಲೆಗಳಾದವು ಎಲ್ಲಾ ರಂಗದಲ್ಲೂ ಕಾಂಗ್ರೆಸ್ ಕೀಳು ಮಟ್ಟದ ರಾಜಕಾರಣ ಮಾಡಿದೆ ಎಂದು ಕಿಡಿಕಾರಿದರು.

ತಮ್ಮ ಹಗರಣಗಳನ್ನ ಮುಚ್ಚಿಹಾಕಲು ಕಾಂಗ್ರೆಸ್ ನವರು ಲೋಕಾಯುಕ್ತವನ್ನ ಮುಚ್ಚಿದರು.  ಕಾಂಗ್ರೆಸ್  ಅವಧಿಯ 59 ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕಿದರು. ನಮ್ಮ ಮೇಲೆ ಆರೋಪ ಮಾಡಿ ನೀವು ಪಾಪ ಕಳೆದು ಕೊಳ್ಳಲು ಸಾಧ್ಯವಿಲ್ಲ. ಮುಂದೆ ನಿಮ್ಮ ಪ್ರಕರಣಗಳು ಬೆಳಕಿಗೆ ಬರಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Key words: Madal Virupakshappa- resign – decision – MLA-CM Bommai.