ಮಹಾ ಪರಿನಿರ್ವಾಣ: ಅಂಬೇಡ್ಕರ್, ಬುದ್ದರ ಪ್ರತಿಮೆಗೆ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮಾಲಾರ್ಪಣೆ

Promotion

ಮೈಸೂರು,ಡಿಸೆಂಬರ್,06,2020(www.justkannada.in) : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೇ ವರ್ಷದ ಮಹಾಪರಿನಿರ್ವಾಣ ಕಾರ್ಯಕ್ರಮಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬುದ್ದರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.

 

Maha Parinirvana-Ambedkar-statue-Buddha-Chancellor-Prof.G.Hemant Kumar

ಮೈಸೂರು ವಿವಿ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರ ಮತ್ತು ಸರ್ಕಾರಿ ಬಾಲಕಿಯರ ಬಾಲ ಮಂದಿರ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೇ ವರ್ಷದ ಮಹಾಪರಿನಿರ್ವಾಣ ದಿನದ ಅಂಗವಾಗಿ ‘’ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಾಣದ ಭಾರತ ಭಾಗ್ಯ ವಿಧಾತ ರೂಪಕ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ’’ ಕ್ಕೆ ಮೊದಲ ಹಂತದಲ್ಲಿ ಮಾನಸಗಂಗೋತ್ರಿಯ ಆವರಣದಲ್ಲಿರುವ ಅಂಬೇಡ್ಕರ್ ಹಾಗೂ ಬುದ್ಧ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಚಾಲನೆ ನೀಡಿದರು.

Maha Parinirvana-Ambedkar-statue-Buddha-Chancellor-Prof.G.Hemant Kumar

ಈ ಸಂದರ್ಭ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಮಹದೇವನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Maha Parinirvana-Ambedkar-statue-Buddha-Chancellor-Prof.G.Hemant Kumar

key words : Maha Parinirvana-Ambedkar-statue-Buddha-Chancellor-Prof.G.Hemant Kumar