ಮಹದಾಯಿ ನದಿ ವಿವಾದ: ಮತ್ತೆ ಕ್ಯಾತೆ ತೆಗೆದ ಗೋವಾ ಸರ್ಕಾರ…

ಬೆಂಗಳೂರು,ಫೆ,26,2020(www.justkannada.in): ಮಹದಾಯಿ  ನದಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸರ್ಕಾರ ಇದೀಗ ಮತ್ತೆ ಕ್ಯಾತೆ ತೆಗೆದಿದೆ. ಕಳಸ ಬಂಡೂರಿ ತಿರುವು ಯೋಜನೆಗೆ ತಡೆ ನೀಡುವಂತೆ ಕೋರಿ ಗೋವಾ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಕಳಸ ಬಂಡೂರಿ ತಿರುವು ಯೋಜನೆಗೆ ತಡೆ ನೀಡುವಂತೆ ಕೋರಿ ಗೋವಾ ಸರ್ಕಾರ ಅರ್ಜಿ ಸಲ್ಲಿಸಿದ್ದು ಮಾರ್ಚ್ 2 ರಂದು ಸುಪ್ರೀಂಕೋರ್ಟ್ ನಲ್ಲಿ ಈ ಅರ್ಜಿ ವಿಚಾರಣೆಗೆ ಬರಲಿದೆ. ಗೋವಾ ಮತ್ತು ಕರ್ನಾಟಕ ನಡುವೆ ಉದ್ಭವಿಸಿರುವ ವಿವಾದ ಈಗ ಮತ್ತೊಂದು ಕಾನೂನು ಸಮರಕ್ಕೆ ಕಾರಣವಾಗಲಿದೆ.

ಮಹದಾಯಿ ನ್ಯಾಯಾಧೀಕರಣದ ಐತೀರ್ಪಿನ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟ್  ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು. ಆದರೆ ಈ ಬಗ್ಗೆ ಮಾತನಾಡಿದ ಗೋವಾ ಸಿಎಂ ಪ್ರಮೋದ್ ಸಾವಂತ್, ಇನ್ನು ಎರಡು-ಮೂರು ದಿನಗಳಲ್ಲಿ ಆದೇಶಕ್ಕೆ ತಡೆ ಕೋರಿ ಸುಪ್ರೀಂಕೋಟ್ ಗೆ ಅರ್ಜಿ ಸಲ್ಲಿಸಲಾಗುವುದು. ಮಹದಾಯಿ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಕರ್ನಾಟಕಕ್ಕೆ ಸೂಚಿಸಬೇಕೆಂದು ಕೋರಲಾಗುವುದು ಎಂದು ಹೇಳಿದ್ದರು.

Key words: Mahadai River -dispute -govt of Goa-petition-supreme court