ಮಹದಾಯಿ ನದಿ ನೀರು ಹಂಚಿಕೆ ಅಧಿಸೂಚನೆ ಹಿನ್ನೆಲೆ: ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ….

kannada t-shirts

ಬೆಂಗಳೂರು,ಫೆ,28,2020(www.justkannada.in): ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರಸರ್ಕಾರ ಅಧಿಸೂಚನೆ ಹೊರಡಿಸಿದ್ದು ಈ ಹಿನ್ನೆಲೆ ಇಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದರು. ಈ ವೇಳೇ ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಮಹದಾಯಿ ನದಿ ನೀರಿನ ಹಂಚಿಕೆ ಕುರಿತಂತೆ ಐತೀರ್ಪು ಪ್ರಕಟವಾಗಿತ್ತು. ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೊನೆಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಕರ್ನಾಟಕ ಮಹದಾಯಿ ನದಿಯಿಂದ 13.05 ಟಿಎಂಸಿ ನೀರು ಬಳಸಬಹುದಾಗಿದೆ.

Key words: Mahadai River –Water- Notification -Water Resources Minister -Ramesh Jarakiholi-CM BSY -discussed

website developers in mysore