“ಮಹಾರಾಷ್ಟ್ರದಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆ: ನನ್ನನ್ನು ಚಿಂತೆಗೀಡುಮಾಡಿದೆ” : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು,ಮಾರ್ಚ್,11,2021(www.justkannada.in) : ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

Maharashtra-Much more-Corona-Cases-Detected-Me-Worried-Minister-Dr.K.Sudhakar 

ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸುವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ.

ನಿಯಮ ಉಲ್ಲಂಘಿಸಿ ತರಗತಿಗಳ ಪುನರಾರಂಭಿಸಿರುವ ಶಾಲೆಗಳ ಪರವಾನಗಿ ರದ್ದು

ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ನನ್ನ ಮನವಿ ಎಂದಿದ್ದಾರೆ.

60 ವರ್ಷ ಮೇಲ್ಪಟ್ಟವರು ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕು

Maharashtra-Much more-Corona-Cases-Detected-Me-Worried-Minister-Dr.K.Sudhakar 

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

key words : Maharashtra-Much more-Corona-Cases-Detected-Me-Worried-
Minister-Dr.K.Sudhakar