ಮಹರ್ಷಿ ವಾಲ್ಮಿಕಿಯು ಕವಿಗಳಿಗೆ ಸ್ಪೂರ್ತಿಯ ಸೆಲೆಯಾಗಿ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ-ಪ್ರೊ.ಜಿ. ಹೇಮಂತ್ ಕುಮಾರ್.

Promotion

ಮೈಸೂರು,ಅಕ್ಟೋಬರ್,20,2021(www.justkannada.in): ಮಹರ್ಷಿ ವಾಲ್ಮಿಕಿ ಅವರು ಕವಿಗಳಿಗೆ ಮತ್ತು ಸಾಹಿತಿಗಳಿಗೆ  ಸ್ಪೂರ್ತಿಯ ಸೆಲೆಯಾಗಿ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ ಎಂದು ಮೈಸೂರು ವಿಶ್ವ ವಿದ್ಯಾನಿಲಯ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ನುಡಿದರು.

ಮೈಸೂರು ವಿವಿಯಲ್ಲಿ ಆಯೋಜಿಸಿದ್ಧ ಮಹರ್ಷಿ ವಾಲ್ಮಿಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರೊ.ಜಿ. ಹೇಮಂತ್ ಕುಮಾರ್, ಸಂಸ್ಕೃತದಲ್ಲಿ ರಚಿಸಲಾಗಿರುವ ರಾಮಾಯಣ ಮಹಾಕಾವ್ಯವು 24,000 ಶ್ಲೋಕಗಳನ್ನು ಹೊಂದಿದೆ. ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಪೂರ್ತಿಯ ಸೆಲೆಯಾಗಿದ್ದಾರೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕಥೆಗಳನ್ನು ರಚಿಸಲಾಗಿದೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ಯಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ರಾಮಾಯಣವು ಭಾರತೀಯರ ಜೀವನ ಚರಿತ್ರೆಯನ್ನು  ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ, ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ಭರತ ಖಂಡದಲ್ಲಿನ ಅರಣ್ಯಗಳು, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿದ್ದಾರೆ. ವಿವಿಧ ಪಾತ್ರಗಳ ಮುಖಾಂತರ, ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು, ಮನೋಜ್ಞವಾಗಿ ಚಿತ್ರಿಸಿದ್ದಾರೆ. ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭಾತೃತ್ಯ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನ ಮುಂತಾದ ಮಾನವೀಯ ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇಂತಹ ಅನನ್ಯವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯನ್ನು `ಕವಿಗಳ ಕವಿ ಎಂದು ಮಹಾಕವಿ ಕಾಳಿದಾಸ ಗೌರವಿಸಿದ್ದಾನೆ ಎಂದು ಹೇಮಂತ್ ಕುಮಾರ್ ಸ್ಮರಿಸಿದರು.

ಭಾರತದ ಪ್ರಥಮ ಪ್ರಧಾನ ಮಂತ್ರಿಯಾಗಿದ್ದ ಜವಾಹರಲಾಲ್ ನೆಹರು ಅವರು ರಚಿಸಿರುವ ‘ಡಿಸ್ಕವರಿ ಆಫ್ ಇಂಡಿಯಾ’ ಪುಸ್ತಕದಲ್ಲಿ, ಜನರ ಮನಸ್ಸಿನ ಮೇಲೆ ಅಗಾಧವಾದ ಪ್ರಭಾವವನ್ನು ಬೀರಿರುವ ಮಹಾಕಾವ ರಾಮಾಯಣ’ ಎಂಬುದಾಗಿ  ಉಲ್ಲೇಖಿಸಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರು “ರಾಮಾಯಣದಂತಹ ಮಹಾಕಾವ್ಯ ಮತ್ತು ವಾಲ್ಮೀಕಿಯಂತಹ ಮಹಾಕವಿ ನಮಗೆ ದೊರೆತಿರುವುದು ಭುವನದ ಭಾಗ್ಯ’ ಎಂದು ಬಣ್ಣಿಸಿದ್ದಾರೆ. ಜಗತ್ತಿನ ಪ್ರಸಿದ ಲೇಖಕ ಮತ್ತು ವಿಮರ್ಶಕನಾದ ಟಿ.ಎಸ್. ಎಲಿಯಟ್, “ನೂರು ವರ್ಷಗಳಿಗೊಮ್ಮೆ ಸಾಹಿತ್ಯ ಮತ್ತು ಸಾಹಿತಿಗಳನ್ನು ವಿಮರ್ಶೆ ಮಾಡುವ ಮತ್ತು ತುಲನೆ ಮಾಡುವ ಕಾಲ ಬರುತ್ತದೆ ಆಗ ಸಾಹಿತ್ಯ ಮತ್ತು ಸಾಹಿತಿಗಳ ಜನಪ್ರಿಯತೆಯ ಸ್ನಾನಮಾನ ಏರುಪೇರಾಗುತ್ತದೆ,” ಎಂದು ಅಭಿಪ್ರಾಯ ಪಡುತ್ತಾನೆ. ರಾಮಾಯಣ ಮಹಾಕಾವ್ಯ ಮತ್ತು ಅದರ ಕತೃ ಮಹರ್ಷಿ ವಾಲ್ಮೀಕಿಯು ಅನಾದಿಕಾಲದಿಂದ ವರ್ತಮಾನದವರೆಗೂ ನಿರಂತರವಾಗಿ ಅಪಾರ ಜನಪ್ರಿಯತೆಯನ್ನು ಹೊಂದಿದ್ದು ಜನಮಾನಸದಲ್ಲಿ ಶಾಶ್ವತ ಸ್ಥಾನವನ್ನು ಪಡೆದಿದ್ದಾರೆ ಎಂದು ನುಡಿದರು.

Key words: Maharishi Valmiki jayanthi- mysore university- Prof.G. Hemanth Kumar.

ENGLISH SUMMARY…

“Maharshi Valmiki has found a permanent place in the hearts of people as an inspiration for poets and litterateurs”: UoM VC
Mysuru, October 20, 2021 (www.justkannada.in): “Maharshi Valmiki has earned a permanent place in the hearts of the people as an inspiration for poets and litterateurs,” opined Prof. G. Hemanth Kumar, Vice-Chancellor, University of Mysore.
He participated in the Maharshi Valmiki Jayanthi program organized by the University of Mysore today. In his address, he explained that there are 24,000 shlokas in the epic Ramayana created by Maharshi Valmiki. “He has remained an inspiration and a guru for many poets and litterateurs. Several books, dramas, and stories are created in many languages based on Valmiki’s Ramayana. Even today, the Ramayana is considered as the most sacred and valuable epic based on facts and has remained an inspiration for the literary world,” he added.
Keywords: University of Mysore/ Prof. G. Hemanth Kumar/ Maharshi Valmiki Jayanthi/ Prof. G. Hemanth Kumar/