ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೇ ಗೋಕಾಕ್ ಕ್ಷೇತ್ರದಿಂದ ನಾನೂ ಸ್ಪರ್ಧಿಸಲ್ಲ-ರಮೇಶ್ ಜಾರಕಿಹೊಳಿ.

Promotion

ವಿಜಯಪುರ,ಮಾರ್ಚ್,10,2023(www.justkannada.in):  ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಮಹೇಶ್  ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ   ನಾನೂ ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಇಂದು ಮಾತನಾಡಿ ತನ್ನ ಆಪ್ತ ಮಹೇಶ್ ಕುಮಟಳ್ಳಿ ಪರ ಬ್ಯಾಟ್ ಬೀಸಿದ ರಮೇಶ್ ಜಾರಕಿಹೊಳಿ, ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ  ಟಿಕೆಟ್ ನೀಡಬೇಕು, ಟಿಕೆಟ್ ನೀಡದಿದ್ದರೇ ನಾನೂ ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸಲ್ಲ. ಬಿಜೆಪಿ ಸರ್ಕಾರ ಸ್ಥಾಪನೆಗಾಗಿ ಸಚಿವ ಸ್ಥಾನ ತ್ಯಾಗ ಮಾಡಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇನೆ. ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೇರಿದ್ದೇನೆ.  ಹೀಗಾಗಿ ಸಚಿವ ಸ್ಥಾನದ ಆಸೆಗಾಗಿ ಬಿಜೆಪಿ ಪಕ್ಷಕ್ಕೆ ಬಂದಿಲ್ಲ ಎಂದರು.

ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ನಾರಾಯಣಗೌಡರು ಬಿಜೆಪಿ ಬಿಡುವುದಾಗಿ ಎಲ್ಲೂ ಹೇಳಿಲ್ಲ. ಕಾಂಗ್ರೆಸ್ ಮುಳುಗುವ ಹಡಗು. ಅಲ್ಲಿಗೆ ಹೋಗೋದು ಒಳ್ಳೆಯದಲ್ಲ ಎಂದರು.

Key words: Mahesh Kumatalli – ticket-contest – Gokak -Ramesh Jarakiholi.