ಈ ಬಾರಿ ಕಾಂಗ್ರೆಸ್ ಗೆ ಬಹುಮತ: ವರುಣಾದಲ್ಲಿ ನಾನು ಗೆದ್ಧೇ ಗೆಲ್ಲುವೆ- ಮಾಜಿ ಸಿಎಂ ಸಿದ್ಧರಾಮಯ್ಯ.

ಮೈಸೂರು,ಮೇ,11,2033(www.justkannada.in):  ಈ ಬಾರಿ ಕಾಂಗ್ರೆಸ್ ಗೆ ಬಹುಮತ ಬರಲಿದ್ದು, ವರುಣಾ ಕ್ಷೇತ್ರದಲ್ಲಿ ನಾನು ಗೆದ್ಧೇ ಗೆಲ್ಲುತ್ತೇನೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾತನಾಡಿದ ಸಿದ್ಧರಾಮಯ್ಯ, ಚುನಾವಣೋತ್ತರ ಸಮೀಕ್ಷೆಗಳಲ್ಲಿ  ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಅಂತಾ ಹೇಳಿದ್ದಾರೆ.  ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್​ 130ರಿಂದ 150 ಸ್ಥಾನ ಗೆಲ್ಲುತ್ತೆ. ಕರಾವಳಿ ಭಾಗದಲ್ಲೂ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.

ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ . ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಎಂದು  ಸಿದ್ಧರಾಮಯ್ಯ ಕಿಡಿಕಾರಿದರು.

Key words: Majority – Congress -win – Varuna-Former CM -Siddaramaiah.