ಮಳವಳ್ಳಿಯ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮಾಜಿ ಸಿಎಂ ಸಿದ್ಧರಾಮಯ್ಯ.

Promotion

ಮಂಡ್ಯ, ಅಕ್ಟೋಬರ್,19,2022(www.justkannada.in):  ಮಳವಳ್ಳಿಯಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಮೃತ ಬಾಲಕಿಯ ನಿವಾಸಕ್ಕೆ ಭೇಟಿ ನೀಡಿದರು.

ಮಳವಳ್ಳಿಯ  ಮೃತ ಬಾಲಕಿಯ ಕುಟುಂಬಸ್ಥರನ್ನ ಭೇಟಿಯಾಗಿ ಮಾಜಿ ಸಿಎಂ ಸಿದ‍್ಧರಾಮಯ್ಯ ಸಾಂತ್ವನ ಹೇಳಿದರು.  ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧರಾಮಯ್ಯ, ಇದು ಅಮಾನುಷ ಕೃತ್ಯ.  ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು.  ಮುಂದೆ ಯಾವ ಹೆಣ್ಣಿಗೂ ಈ ರೀತಿ  ಆಗಬಾರದು. ಅತ್ಯಾಚಾರಿಗಳಿಗೆ ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.koppal-former-cm-siddaramaiah-two-chief-ministers-state-bjp-government

Key words: Malavalli -girl –rape- murder- case-Former CM –Siddaramaiah- condoled