ಮಲೆನಾಡಿನ ಸಮಸ್ಯೆಗಳು ಕಾಂಗ್ರೆಸ್ ಸರ್ಕಾರದ ಪಾಪದ ಕೂಸು- ಸಂಸದ ಬಿವೈ ರಾಘವೇಂದ್ರ

Promotion

ಶಿವಮೊಗ್ಗ,ನವೆಂಬರ್,30,2022(www.justkannada.in):  ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹರಿಸುವಂತೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ನಡೆಸಿದ ಪಾದಯಾತ್ರೆ ಬಗ್ಗೆ ಸಂಸದ ಬಿವೈ ರಾಘವೇಂದ್ರ ಟೀಕಿಸಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಬಿವೈ ರಾಘವೇಂದ್ರ,, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೆಲಸ ಮಾಡಲಿಲ್ಲ. ಅಧಿಕಾರದಲ್ಲಿದ್ದಾಗ ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಬಹುದಿತ್ತು . ಸಂತ್ರಸ್ತರ ಹೆಸರು ಹೇಳಿಕೊಂಡು ಕಾಂಗ್ರೆಸ್ ಪ್ರಚಾರ ಪಡೆದುಕೊಳ್ಳುತ್ತಿದೆ.  ನಿಜವಾದ ರೈತರು ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿರಲಿಲ್ಲ. ಮಲೆನಾಡಿನ ಸಮಸ್ಯೆಗಳು ಕಾಂಗ್ರೆಸ್ ಸರ್ಕಾರದ ಪಾಪದ ಕೂಸು ಎಂದು ಕಿಡಿಕಾರಿದರು.

Key words: malenadu-problems – sin – Congress government – MP- BY Raghavendra