Promotion
ಹುಬ್ಬಳ್ಳಿ,ಮೇ,4,2023(www.justkannada.in): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕುರಿತು, ಮಣಿಕಂಠ ರಾಠೋಡ ಮಾತಾಡಿದ ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಆಡಿಯೋ ತಿರುಚಲಾಗಿದೆಯೋ ಏನು ನೋಡಬೇಕು. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದರು.
ಕಾಂಗ್ರೆಸ್ ಪರ ನಟ ಶಿವರಾಜ್ ಕುಮಾರ್ ಪ್ರಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಶಿವರಾಜ್ ಕುಮಾರ್ ಪ್ರಚಾರ ಬಗ್ಗೆ ನನಗೇನು ಅಭ್ಯಂತರವಿಲ್ಲ ಕಾಂಗ್ರೆಸ್ ಪರ ಪ್ರಚಾರಕ್ಕೆ ಸೋನಿಯಾಗಾಂಧಿ ಬರುತ್ತಿದ್ದಾರೆ. ಇಂದು ಹಾವೇರಿಗೆ ಪ್ರಧಾನಿ ಮೋದಿ ಬರಲಿದ್ದಾರೆ. ಮೊದಲಿಗಿಂತಲೂ ಈಗ ಮೋದಿ ಆಲೆ ಜಾಸ್ತಿಯಾಗಿದೆ ಎಂದರು.
Key words: mallikarjuna kharge- audio- case -investigate – CM Bommai.