ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಭರ್ಜರಿ ಗೆಲುವು.

Promotion

ಪಶ್ಚಿಮ ಬಂಗಾಳ,ಅಕ್ಟೋಬರ್,3,2021(www.justkannada.in):   ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭವಾನಿಪುರ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್ ವಿರುದ್ಧ 58 ಸಾವಿರಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿದ್ದ ಭವಾನಿಪುರ ಉಪ ಚುನಾವಣೆಯ ಮತ ಏಣಿಕೆ ಕಾರ್ಯ ನಡೆಯಿತು. ಮತಏಣಿಕೆಯಲ್ಲಿ ಆರಂಭದಿಂದಲೂ ದೀದಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರು. ಇದೀಗ ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು,  ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದಾರೆ.

ಭವಾನಿಪುರ ಉಪಚುನಾವಣೆಯಲ್ಲಿ  ಗೆಲುವು ಸಾಧಿಸುವ ಮೂಲಕ ತಮ್ಮ ಸಿಎಂ ಕುರ್ಚಿಯನ್ನು ಉಳಿಸುವಲ್ಲಿ ಯಶಸ್ವಿಯಾದರು. ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಪರಾಭವಗೊಂಡಿದ್ದರು. ಚುನಾವಣೆಯಲ್ಲಿ ಟಿಎಂಸಿಗೆ ಬಹುಮತ ಬಂದಿದ್ದ ಹಿನ್ನೆಲೆ ಸಿಎಂ ಸ್ಥಾನ ಅಲಂಕರಿಸಿದ್ದರು.

Key words: Mamata Banerjee –win- Bhawanipur by-election