ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿ ಸಜೀವ ದಹನ: ನಾಲ್ವರ ಸ್ಥಿತಿ ಗಂಭೀರ.

ಬೆಂಗಳೂರು,ಆಗಸ್ಟ್,23,2021(www.justkannada.in) ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿ ಸಜೀವದಹನವಾಗಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಮಾಗಡಿ ರಸ್ತೆಯ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಸಜೀವ ದಹನವಾಗಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು ಗಾಯಾಳುಗಳನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ 6 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಸಿಲಿಂಡರ್ ಸ್ಪೋಟದಿಂದ ಅಕ್ಕಪಕ್ಕದ ನಿವಾಸಿಗಳಿಗೂ ಗಾಯಗಳಾಗಿದೆ ಎನ್ನಲಾಗಿದೆ.  ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Key words:  man -bursts -alive – cylinder –explodes-bangalore