ಮೂವರು ಮಕ್ಕಳನ್ನ ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

Promotion

ಮಂಗಳೂರು,ಜೂನ್,24,2022(www.justkannada.in): ವ್ಯಕ್ತಿಯೊಬ್ಬ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದು  ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರು ತಾಲೂಕಿನ ಪದ್ಮನೂರು ಬಳಿ ಈ ಘಟನೆ ನಡೆದಿದೆ. ರಶ್ಮಿತಾ (14), ಉದಯ್ (11), ದಕ್ಷಿತ್ (04) ಮೃತಪಟ್ಟವರು. ವಿಜೇಶ್ ಶೆಟ್ಟಿಗಾರ್ ಎಂಬಾತ ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆಗೈದು ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Key words:  man -tried –commit- suicide – three- children – kill