ಕಚೇರಿಗೆ ನಿಗದಿತ ಅವಧಿಗೆ ಹಾಜರಿ ಮತ್ತು ಕರ್ತವ್ಯದ ಅವಧಿಯಲ್ಲಿ ಕಚೇರಿಯಲ್ಲಿರುವುದು ಕಡ್ಡಾಯ- ಸರ್ಕಾರಿ ನೌಕರರಿಗೆ ಸರ್ಕಾರ ಸೂಚನೆ.

kannada t-shirts

ಬೆಂಗಳೂರು,ಜುಲೈ,25,2022(www.justkannada.in): ರಾಜ್ಯ ಸರ್ಕಾರಿ ನೌಕರರು ಕಛೇರಿಗೆ ನಿಗದಿತ ಅವಧಿಗೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಛೇರಿಯಲ್ಲಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರ ಸೂಚನೆನೀಡಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಂದಿತಾ ಶರ್ಮಾ, ರಾಜ್ಯ ಸರ್ಕಾರದ ಕಛೇರಿಗಳಲ್ಲಿ ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಾರ್ಯನಿಷ್ಠೆಯನ್ನು ತೋರಲು ಈಗಾಗಲೇ ಸರ್ಕಾರವು ಸಾಕಷ್ಟು ಸುತ್ತೋಲೆಗಳಲ್ಲಿ ಸೂಚನೆಗಳನ್ನು ನೀಡಿದೆ.

ಆದಾಗ್ಯೂ, ಸರ್ಕಾರಿ ನೌಕರರು/ಅಧಿಕಾರಿಗಳಲ್ಲಿ ಸಮಯ ಪ್ರಜ್ಞೆ ಮತ್ತು ಕಾರ್ಯನಿಷ್ಠೆಯ ಕೊರತೆ ಯನ್ನು ಇತ್ತೀಚಿನ ದಿನಗಳಲ್ಲಿ ಅವಲೋಕಿಸಲಾಗಿದೆ.

ಸಾರ್ವಜನಿಕರು ದೂರದ ಸ್ಥಳಗಳಿಂದ ಸರ್ಕಾರಿ ಕಛೇರಿಯಲ್ಲಿನ ತಮ್ಮ ಕಾರ್ಯಗಳಿಗೆ ಬೆಳಗ್ಗೆ ನಿಗದಿತ ಅವಧಿಗೆ ಸರ್ಕಾರದ ಕಛೇರಿಗಳಿಗೆ ಭೇಟಿ ನೀಡಿದಾಗ ಬಹುತೇಕ ಕಛೇರಿಗಳಲ್ಲಿ ಸಿಬ್ಬಂದಿಗಳು/ ಅಧಿಕಾರಿಗಳು ಕಛೇರಿಗೆ ಹಾಜರಾಗಿಲ್ಲದೇ ಇರುವ ಕಾರಣ ಸಾಮಾನ್ಯ ಜನರು ಬವಣೆ ಪಡುವಂತಾಗಿದೆ.covid-dead-body-cancels-license-order-state-government

ಈ ಹಿನ್ನೆಲೆಯಲ್ಲಿ, ಸರ್ಕಾರದ ಕಛೇರಿಯ ಪ್ರಾರಂಭದ ಸಮಯ ಬೆಳಗ್ಗೆ 10.00ಗಂಟೆಗೆ ಕಡ್ಡಾಯವಾಗಿ ಹಾಜರಾಗುವುದು ಹಾಗೂ ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು, ಕರ್ತವ್ಯ ನಿರ್ವಹಿಸತಕ್ಕದ್ದು. ಕಛೇರಿ ಅವಧಿಯಲ್ಲಿ ನೌಕರರು/ಅಧಿಕಾರಿಗಳು ಅನ್ಯ ಕರ್ತವ್ಯದ ಮೇರೆಗೆ ತೆರಳಬೇಕಾಗಿದ್ದಲ್ಲಿ ಚಲನ-ವಲನ ವಹಿಯಲ್ಲಿ ಸಕಾರಣವನ್ನು ನಮೂದಿಸಿ, ಮೇಲಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ನಿಗದಿತ ಕಾಲಾವಧಿಗಿಂತ ವಿಳಂಬವಾಗಿ ಹಾಜರಾಗುವ ಹಾಗೂ ಕಛೇರಿ ಅವಧಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದ /ಚಲನ-ವಲನ ವಹಿಯಲ್ಲಿ ನಮೂದಿಸಿ, ಮೇಲಾಧಿಕಾರಿಗಳ ಅನುಮತಿ ಪಡೆದಿಲ್ಲದ ನೌಕರರು, ಅಧಿಕಾರಿಗಳ ವಿರುದ್ಧ ಸಕ್ಷಮ ಪ್ರಾಧಿಕಾರವು ಸೂಕ್ತ ಶಿಸ್ತು ಕ್ರಮ ಜರುಗಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Key words: mandatory – attend – office – duty –period-Government -Employees.

website developers in mysore