ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ

ಮೈಸೂರು.ಅಕ್ಟೊಬರ್.30,2020(www.justkannada.in)  : ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.jk-logo-justkannada-logo

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರು ಜಿಲ್ಲೆಯ ಕೈಗಾರಿಕೆಗಳ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಮಾಡಿಸುವಲ್ಲಿ ಕೈಗಾರಿಕೋದ್ಯಮಿಗಳು ಸಹಕರಿಸಬೇಕು ಎಂದರು.

ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಮಾಡಿಸಲು ಕೈಗಾರಿಕಾ ಸಂಘದವರು ನಿಗದಿತ ಜಾಗವನ್ನು ಗುರುತಿಸಿ ತಿಳಿಸಿದರೆ, ಜಿಲ್ಲಾಡಳಿತದಿಂದ ಉಚಿತವಾಗಿ ಪರೀಕ್ಷೆ ಮಾಡಲಾಗುತ್ತದೆ. ಈ ಬಗ್ಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಅನೇಕ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ 50 ವರ್ಷ ಮೇಲ್ಪಟ್ಟ ಕಾರ್ಮಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಅವರಿಗೆ ಸೋಂಕಿನ ಲಕ್ಷಣ ಕಂಡುಬಂದರೆ ಕೂಡಲೇ ಪರೀಕ್ಷೆ ಮಾಡಿಸಲು ಮುಂದಾಗಬೇಕು ಎಂದು ತಿಳಿಸಿದರು.Mandatory,Covid,test,workers,District,Collector, Rohini Sindhuri,Note

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಅಮರನಾಥ್, ನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜು, ಮೈಸೂರು ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ವಾಸು, ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್, ಜೆಕೆ ಟೈರ್ಸ್ ಸಂಸ್ಥೆಯ ಉಪಾಧ್ಯಕ್ಷ ಈಶ್ವರ ರಾವ್, ಅಲೋಕ್ ಗುಪ್ತ ಇನ್ನಿತರರು ಉಪಸ್ಥಿತರಿದ್ದರು.

key words : Mandatory-Covid-test-workers-District-Collector- Rohini Sindhuri-Note