ಪಕ್ಷಕ್ಕಾಗಿ ದುಡಿದವರಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿದೆ- ಸಚಿವ ಚಲುವರಾಯಸ್ವಾಮಿ.

Promotion

ಮಂಡ್ಯ, ಅಕ್ಟೋಬರ್​,7,2023(www.justkannada.in): ಪಕ್ಷಕ್ಕಾಗಿ ದುಡಿದವರಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿದೆ ಎಂದು ಕೃಷಿ ಸಚಿವ ಎನ್​.ಚಲುವರಾಯಸ್ವಾಮಿ  ತಿಳಿಸಿದ್ದಾರೆ.

ಇಂದು  ಮಾಧ್ಯಮದಗಳ  ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಜೆಡಿಎಸ್ ಯಾವತ್ತೂ ಚುನಾವಣಾ ಪೂರ್ವ ಮೈತ್ರಿಗೆ ಹೋಗಿಲ್ಲ. ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಹೀನಾಯವಾಗಿದೆ. ಹೀಗಾಗಿ ಜೆಡಿಎಸ್ ಜೊತೆ ಬಿಜೆಪಿಯವರು ಮೈತ್ರಿ ಮಾಡಿಕೊಂಡಿದ್ದಾರೆ. ನಮ್ಮ ಸರ್ಕಾರದ ಆಡಳಿತ ನೋಡಿ ಜೆಡಿಎಸ್​, ಬಿಜೆಪಿಯವರಿಗೆ ಭಯ ಉಂಟಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕಾವೇರಿ ನದಿ ವಿವಾದ ಕುರಿತು ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ಕಾವೇರಿ ನದಿ ನೀರಿನ ಸಮಸ್ಯೆ ಇದೆ. ಆದರೆ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೊಟ್ಟಿಲ್ಲ. ಬರಗಾಲದ ಬಗ್ಗೆ ಚರ್ಚೆ ಮಾಡುವುದಕ್ಕೂ ಕೇಂದ್ರ ಅವಕಾಶ ಕೊಡುತ್ತಿಲ್ಲ. ಮೋದಿ ಬಳಿ ಮಾಜಿ ಸಿಎಂಗಳಾದ ಹೆಚ್​ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಬಿಎಸ್​ ಯಡಿಯೂರಪ್ಪ ಹೋಗಬಹುದಿತ್ತು. ಕಾವೇರಿ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ಬಳಿ ಚರ್ಚಿಸಬಹುದಿತ್ತು. ಆದರೆ  ಈ ವಿಚಾರದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Key words: Mandya -Lok Sabha -ticket – Minister- Chaluvarayaswamy.