ಕೆಆರ್ ಎಸ್ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದ ಸಂಸದೆ ಸುಮಲತಾ ಅಂಬರೀಶ್.

Promotion

ಮಂಡ್ಯ,ಜುಲೈ,14,2021(www.justkannada.in):  ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪ, ವಾಗ್ವಾದಗಳು ನಡೆಯುತ್ತಿದ್ದು ಈ ಮಧ್ಯೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಕೆ.ಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.jk

ಮೈಸೂರಿನಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಡ್ಯಾಂಗೆ ಭೇಟಿ ನೀಡಿದ ಸಂಸದೆ ಸುಮಲತಾ ಅಂಬರೀಶ್  ಡ್ಯಾಂ ಪರಿಶೀಲಿಸಿದರು. ಬಳಿಕ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಅಧಿಕಾರಿಗಳ ಜತೆ ಸಭೆ ನಡೆಸಲಿರುವ ಸಂಸದೆ ಸುಮಲತಾ ಅಂಬರೀಶ್ ನಂತರ ಬೇಬಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಇನ್ನು ಅಕ್ರಮ ಗಣಿಗಾರಿಕೆಯಿಂದಾಗಿ ಕೆ.ಆರ್.ಎಸ್.ಡ್ಯಾಂಗೆ ಹಾನಿಯಾಗಿದೆ. ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಂಸದೆ ಸುಮಲತಾ ತಿಳಿಸಿದ್ದಾರೆ. ನನ್ನ ಹೇಳಿಕೆಗೆ ನಾನು ಬದ್ಧ. ಸಣ್ಣಪುಟ್ಟ ಬಿರುಕು ಬಿಟ್ಟಿತ್ತು. ಅದನ್ನು ಗ್ರೌಟಿಂಗ್ ಬಳಸಿ ರೀಫಿಲ್ ಮಾಡಲಾಗಿದೆ. ಅಕ್ರಮ ಗಣಿಗಾರಿಕೆಯಿಂದ ಡ್ಯಾಂಗೆ ಆಗುತ್ತಿರುವ ಇಂತಹ ಹಾನಿ ತಪ್ಪಿಸಬೇಕಿದೆ ಎಂದು ಹೇಳಿದರು.

 

Key words: mandya-MP-Sumalatha Ambarish-visit- KRS Dam.