ಆದಿತ್ಯ ರಾವ್ ಮಾನಸಿಕ ಅಸ್ವಸ್ಥ: ಮಾನಸಿಕ ಖಿನ್ನತೆಯಿಂದಲೇ ಈ ಕೃತ್ಯವೆಸಗಿದ್ದಾನೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಬೆಂಗಳೂರು,ಜ,22,2020(www.justkannada.in): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ನಂತರ ಶರಣಾಗಿರುವ ಆದಿತ್ಯ ರಾವ್ ಒಬ್ಬ ಮಾನಸಿಕ ಅಸ್ವಸ್ಥ.  ಮಾನಸಿಕ ಖಿನ್ನತೆಯಿಂದಾಗಿಯೇ ಆತ ಈ ಕೃತ್ಯವೆಸಗಿದ್ದಾನೆ ಎಂದು  ಗೃಹ ಸಚಿವ ಬಸವರಾಜ್ ಬೊಮ್ಮಾಯಿ  ತಿಳಿಸಿದ್ದಾರೆ.

ಇಂದು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಂಗಳೂರು ವಿಮಾನ ನಿಲ್ದಾಣದ ಬಳಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಾನಸಿಕ ಅಸ್ವಸ್ಥ. ಆತನಿಗೆ ಯಾವುದೇ ಕೆಲಸ ಇಲ್ಲ. ಕೆಲಸ ಸಿಕ್ಕಿಲ್ಲ ಎನ್ನುವ ಕಾರಣದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಇದೇ ಕಾರಣದಿಂದಾಗಿ ಆದ ಮಂಗಳೂರು ವಿಮಾನ ನಿಲ್ದಾಣದ ಬಳಿ ಬಾಂಬ್ ಇಟ್ಟಿರಬಹುದು ಎಂಬುದಾಗಿ ತಿಳಿದು ಬಂದಿದೆ. ಮೂರು ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತ ಈಗಾಗಲೇ ಎರಡು ಕೇಸ್ ನಲ್ಲಿ ಶಿಕ್ಷೆ ಅನುಭವಿಸಿದ್ದಾನೆ ಎಂದು ತಿಳಿಸಿದರು.

ಪ್ರಕರಣ ಕುರಿತು ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪಿ ಮಾನಸೀಕ ಅಸ್ವಸ್ಥ ಎಂಬುದಾಗಿ ಬಿಂಬಿಸಿ, ಪ್ರಕರಣ ಮುಚ್ಚಿಹಾಕಲು ಯತ್ನಿಸಬಾರದು. ಆರೋಪಿ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದರು.

Key words: mangalore- airport-bomb- Aditya Rao  -mental depression- Home Minister -Basavaraja Bommai.